BREAKING : ಬೆಂಗಳೂರು ಕಾಲ್ತುಳಿತ ದುರಂತ : ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸಲು ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಗಾಯಗೊಂಡವರ ಚಿಕಿತ್ಸಾ ವೆಚ್ಚ ಭರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದಿನಾಂಕ:04.06.2025 ರಂದು RCB ತಂಡದ ವಿಜಯೋತ್ಸವ ಅಭಿನಂದನಾ ಸಮಾರಂಭದಲ್ಲಿ ಸಂಭವಿಸಿದ ಕಾಲ್ತುಳಿತದ ದುರಂತದಲ್ಲಿ 11 ಜನ ಮೃತಪಟ್ಟಿದ್ದು ಹಾಗೂ ಸುಮಾರು ಜನ ಗಾಯಗೊಂಡಿದ್ದು, ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸುವಂತೆ ಸೂಚನೆ ನೀಡಿದ್ದಾರೆ.
ಅದರನ್ವಯ, ಗಾಯಾಳುಗಳಿಗೆ ಸೂಕ್ತವಾದ ವೈದ್ಯಕೀಯ ನೆರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಒದಗಿಸಲು ಕ್ರಮ ಕೈಗೊಳ್ಳುವುದು. ಮುಂದುವರೆದು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಅಗತ್ಯ ಸಮನ್ವಯ ಕ್ರಮ ತೆಗೆದುಕೊಳ್ಳಲು ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read