Bengaluru : ಶಾಲಾ ಮಕ್ಕಳಿಂದಲೇ ಶೌಚಾಲಯ ಕ್ಲೀನ್ ಮಾಡಿಸಿದ ಶಿಕ್ಷಕರು : ಪೋಷಕರ ಪ್ರತಿಭಟನೆ

ಬೆಂಗಳೂರು : ಕೋಲಾರದ ಘಟನೆ ಮಾಸವ ಮುನ್ನವೇ  ಬೆಂಗಳೂರಿನಲ್ಲಿ ಶಾಲೆ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿದ ಘಟನೆ ನಡೆದಿದೆ.

ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಬಳಿ ಶೌಚಾಲಯ ಕ್ಲೀನಿಂಗ್ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆ ಹಿನ್ನೆಲೆ ಶಿಕ್ಷಕರು ಹಾಗೂ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಮಕ್ಕಳನ್ನು ಶೌಚಾಲಯ ಕ್ಲೀನ್ ಮಾಡಲು ಬಳಸಿಕೊಳ್ಳಬೇಡಿ ಎಂದು ಅದೆಷ್ಟೇ ಬಾರಿ ಹೇಳಿದರೂ ಶಿಕ್ಷಕರು ಬೇಜವಾಬ್ದಾರಿಯಿಂದ ವರ್ತಿಸಿ ಮಕ್ಕಳ ಬಳಿ ಈ ರೀತಿ ಕೆಲಸ ಮಾಡಿಸಿದ್ದಾರೆ ಎಂದು ಪೋಷಕರು ಶಾಲೆಯ ಶಿಕ್ಷಕರನ್ನು ತರಾಟೆ ತೆಗೆದುಕೊಂಡಿದ್ದಾರೆ. ಮಕ್ಕಳು ಫಿನಾಯಿಲ್, ಬ್ಲೀಚಿಂಗ್ ಪೌಡರ್ ಹಿಡಿದುಕೊಂಡು ಶೌಚಾಲಯ ಕ್ಲೀನಿಂಗ್ ಮಾಡುತ್ತಿರುವ ದೃಶ್ಯಗಳು ಸೆರೆಯಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read