HomeLatest News‘ಬೆಂಗಳೂರು ತಂತ್ರಜ್ಞಾನ ಶೃಂಗಸಭೆ’ ಯಶಸ್ವಿ: 57 ದೇಶಗಳ 20 ಸಾವಿರ ಪ್ರತಿನಿಧಿಗಳು, 92 ಸಾವಿರ ವೀಕ್ಷಕರ...

‘ಬೆಂಗಳೂರು ತಂತ್ರಜ್ಞಾನ ಶೃಂಗಸಭೆ’ ಯಶಸ್ವಿ: 57 ದೇಶಗಳ 20 ಸಾವಿರ ಪ್ರತಿನಿಧಿಗಳು, 92 ಸಾವಿರ ವೀಕ್ಷಕರ ಭೇಟಿ

ಬೆಂಗಳೂರು: 3 ದಿನಗಳವರೆಗೆ ನಡೆದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ 2025 ಯಶಸ್ವಿಯಾಗಿ ಸಂಪನ್ನಗೊಂಡಿದೆ.

ಈ ಸಮ್ಮಿಟ್‌ಗೆ 92 ಸಾವಿರಕ್ಕೂ ಅಧಿಕ ವೀಕ್ಷಕರು ಭೇಟಿ ನೀಡಿದ್ದಾರೆ. 57ಕ್ಕೂ ಹೆಚ್ಚು ದೇಶಗಳ 20,680 ಪ್ರತಿನಿಧಿಗಳು ವಿವಿಧ ಸಮ್ಮೃಳನಗಳಲ್ಲಿ ಭಾಗವಹಿಸಿದ್ದು, ಉದ್ದಿಮೆ ಸಂದರ್ಶಕರು ವಹಿವಾಟು ವೃದ್ಧಿ ಅವಕಾಶಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.

100 ವಿಚಾರಗೋಷ್ಠಿಗಳಲ್ಲಿ ಉದ್ಯಮದ 630ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳು, ಭಾಷಣಕಾರರು ವಿಚಾರಗಳನ್ನು ಹಂಚಿಕೊಂಡಿದ್ದಾರೆ. 1,015 ಪ್ರದರ್ಶಕರು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಪ್ರದರ್ಶಿಸಿದ್ದಾರೆ. ವಿವಿಧ ವರ್ಗಗಳ ಅಡಿಯಲ್ಲಿ ಪ್ರದರ್ಶಕ ಮಳಿಗೆಗಳಿಗೆ ಪ್ರಶಸ್ತಿಗಳನ್ನು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular