HomeKarnatakaನ. 19 ರಿಂದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ: ಒಂದೇ ವೇದಿಕೆಯಲ್ಲಿ ನವೋದ್ಯಮಗಳು, ಜಾಗತಿಕ ಮಟ್ಟದ ಹೂಡಿಕೆದಾರರು...

ನ. 19 ರಿಂದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ: ಒಂದೇ ವೇದಿಕೆಯಲ್ಲಿ ನವೋದ್ಯಮಗಳು, ಜಾಗತಿಕ ಮಟ್ಟದ ಹೂಡಿಕೆದಾರರು ಭಾಗಿ

ಬೆಂಗಳೂರು: ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 2024 ಇದೇ ನವೆಂಬರ್‌ 19 ರಿಂದ 21ರ ವರೆಗೆ ನಡೆಯಲಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಆಸ್ಟ್ರೇಲಿಯಾ, ಬ್ರಿಟನ್‌, ಫ್ರಾನ್ಸ್‌, ಆಸ್ಟ್ರೀಯ, ಜರ್ಮನಿ, ಸ್ವಿಡ್ಜರ್ಲೆಂಡ್‌, ಇಸ್ರೇಲ್‌, ಅಮೆರಿಕದ ಸಹಯೋಗದಲ್ಲಿ ಶೃಂಗಸಭೆ ನಡೆಯಲಿದೆ. ಉದ್ಘಾಟನೆ ಸಮಾರಂಭದಲ್ಲಿ ಜರ್ಮನಿಯ ಆರ್ಥಿಕ ಇಲಾಖೆಯ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಮೂರು ದಿನಗಳ ಶೃಂಗಸಭೆಯಲ್ಲಿ ನವೋದ್ಯಮಗಳಿಗೆ ಸಂಬಂಧಿಸಿದಂತೆ ಹಲವು ವಿಚಾರಗೋಷ್ಠಿಗಳು ನಡೆಯಲಿವೆ. ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ನವೋದ್ಯಮಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular