HomeKarnatakaBREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಟೆಂಟ್ ಹೌಸ್ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಹೆಣ್ಣೂರು ಬಳಿಯ ಕಮ್ಮನಹಳ್ಳಿ ಬಳಿ ನಡೆದಿದೆ.

ಕಮ್ಮನಹಳ್ಳಿಯ ಕುಳ್ಳಪ್ಪ ಸರ್ಕಲ್ ನಲ್ಲಿರುವ ಟೆಂಟ್ ಹೌಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಬಂದ್ ಆಗಿದ್ದ ಟೆಂಟ್ ಹೌಸ್ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಟೆಂಟ್ ಹೌಸ್ ನಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular