
ಶಿವಾಜಿನಗರದಲ್ಲಿ ಸದಾಶಿವನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸೈಯದ್ ಸಮೀವುಲ್ಲಾಗೆ ಚಾಕು ಇರಿಯಲಾಗಿದ್ದು, ಅವರ ಕೈಗೆ ಗಂಭೀರ ಗಾಯಗಳಾಗಿದೆ. ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದವನನ್ನು ಹಿಡಿಯಲು ಹೋದ ಪೊಲೀಸ್ ಸಿಬ್ಬಂದಿ ಮೇಲೆಯೇ ಹಸನ್ ಖಾನ್ ಎಂಬ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.
ಸಾರ್ವಜನಿಕರ ಎದುರೇ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿದ್ದು ಆತಂಕಕಾರಿಯಾಗಿದೆ. ಕಾನೂನನ್ನು ಕಾಪಾಡುವ ಪೊಲೀಸರಿಗೆ ಸರಿಯಾದ ರಕ್ಷಣೆ ಇಲ್ಲವಾ ಎಂಬ ಪ್ರಶ್ನೆ ಮೂಡಿದೆ.

