Bengaluru : ಮಾಲ್ ನಲ್ಲಿ ಯುವತಿಯನ್ನು ವಿಕೃತವಾಗಿ ಮುಟ್ಟಿದ್ದ ‘ಅಂಕಲ್’ ಮಕ್ಕಳಿಗೆ ಪಾಠ ಹೇಳಿಕೊಡ್ತಿದ್ದ ಮೇಷ್ಟ್ರಂತೆ..!

ಬೆಂಗಳೂರು : ಬೆಂಗಳೂರಿನ ಲುಲು ಮಾಲ್ ನಲ್ಲಿ ಯುವತಿಯನ್ನು ಹಿಂದಿನಿಂದ ಅಸಭ್ಯವಾಗಿ ಮುಟ್ಟಿ ವಿಕೃತಿ ಮೆರೆದಿದ್ದ ವ್ಯಕ್ತಿ ಮಕ್ಕಳಿಗೆ ಪಾಠ ಹೇಳಿಕೊಟ್ಟಿದ್ದ ಮೇಷ್ಟ್ರು ಎಂಬುದು ತಿಳಿದು ಬಂದಿದೆ.

ಮಕ್ಕಳಿಗೆ ಪಾಠ ಹೇಳಿಕೊಟ್ಟು ತಿದ್ದಿ ಬುದ್ದಿ ಸರಿದಾರಿಗೆ ತರುವ ಗುರುಗಳೇ ಇಂತಹ ಅಸಹ್ಯ ಕೃತ್ಯ ಎಸಗಿದ್ದು ನಿಜಕ್ಕೂ ದುರಂತವೇ ಸರಿ.

ಅಗ್ರಹಾರ ದಾಸರಹಳ್ಳಿಯ ನಿವೃತ್ತ ಮುಖ್ಯ ಶಿಕ್ಷಕ ಅಶ್ವತ್ ನಾರಾಯಣ್ ಎಂಬಾತ ಈ ಕೃತ್ಯ ಎಸಗಿದ್ದನು ಎಂಬುದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆಶಿ. ಶಿವನಹಳ್ಳಿ ಬಳಿ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕನಾಗಿ ನಿವೃತ್ತಿ ಹೊಂದಿದ್ದನು. ಮಾಲ್ ನಲ್ಲಿ ಇಂತಹ ಅಸಹ್ಯ ಕೆಲಸ ಮಾಡಿ ಇದೀಗ ತಲೆಮರೆಸಿಕೊಂಡಿದ್ದಾನೆ.

ಈತ ಬೆಂಗಳೂರಿನ ಲುಲು ಮಾಲ್ ನಲ್ಲಿ ವ್ಯಕ್ತಿಯೋರ್ವ ಯುವತಿಯ ಹಿಂಭಾಗವನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನು ವ್ಯಕ್ತಿಯೊಬ್ಬರು ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಈ ಸಂಬಂಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಲುಲು ಮಾಲ್ ಅಧಿಕಾರಿ ಆರೋಪಿ ವಿರುದ್ಧ ದೂರು ನೀಡಿದ್ದು, ಪೊಲೀಸರು ವಿಡಿಯೋ ಆಧರಿಸಿ ತನಿಖೆ ಶುರು ಮಾಡಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read