HomeKarnatakaಬೆಂಗಳೂರು : 'ಅಶ್ಲೀಲ ವೀಡಿಯೋ' ತೋರಿಸಿ ಪತಿಯಿಂದ ಟಾರ್ಚರ್, ಪೆಟ್ರೋಲ್ ಸುರಿದುಕೊಂಡು 'ಗೃಹಿಣಿ' ಆತ್ಮಹತ್ಯೆ..!

ಬೆಂಗಳೂರು : ‘ಅಶ್ಲೀಲ ವೀಡಿಯೋ’ ತೋರಿಸಿ ಪತಿಯಿಂದ ಟಾರ್ಚರ್, ಪೆಟ್ರೋಲ್ ಸುರಿದುಕೊಂಡು ‘ಗೃಹಿಣಿ’ ಆತ್ಮಹತ್ಯೆ..!

ನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಗಂಡನ ಕೃತ್ಯಕ್ಕೆ ಮನನೊಂದ ಪತ್ನಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅನುಷಾ ಎಂದು ಗುರುತಿಸಲಾಗಿದೆ. ಈಕೆಯ ಪತಿ ಶ್ರೀಹರಿ ಮೊಬೈಲ್ನಲ್ಲಿ ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಕಿರುಕುಳ ನೀಡುತ್ತಿದ್ದಂತೆ.

ಅಲ್ಲದೇ ಪತಿ ಮತ್ತೋರ್ವ ಮಹಿಳೆ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು.ಇದನ್ನು ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಎರಡು ತಿಂಗಳಿಂದ ಡೈವರ್ಸ್ ಕೊಡುವಂತೆ ಗಂಡ ಪೀಡಿಸುತ್ತಿದ್ದು, ಇದರಿಂದ ಬೇಸತ್ತು ಅನುಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ 2 ದಿನಗಳ ಹಿಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಅನುಷಾ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular