HomeLatest Newsಬೆಂಗಳೂರು ವಾಹನ ಸವಾರರ ಗಮನಕ್ಕೆ: ಸಂಚಾರ ಬದಲಾವಣೆ: ಪರ್ಯಾಯ ಮಾರ್ಗಗಳ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು ವಾಹನ ಸವಾರರ ಗಮನಕ್ಕೆ: ಸಂಚಾರ ಬದಲಾವಣೆ: ಪರ್ಯಾಯ ಮಾರ್ಗಗಳ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: 77ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣೆಕ್‌ ಶಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ಹಾಗೂ ಪರೇಡ್‌ ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ರಸ್ತೆ ಸಂಚಾರ ಮಾರ್ಗ ಬದಲಿಸಲಾಗಿದೆ. ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳ ಬಗ್ಗೆ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಪೊಲೀಸ್‌ ಪಡೆಗಳ ಪಥಸಂಚಲನಕ್ಕೆ ಮಾಣೆಕ್‌ ಶಾ ಪರೇಡ್‌ ಮೈದಾನ ಸಿದ್ಧವಾಗಿದೆ. ಬೆಳಗ್ಗೆ 8.30ರಿಂದ 10.30 ರವರೆಗೆ ಮಾಣೆಕ್‌ ಶಾ ಮೈದಾನದ ಸುತ್ತ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗ್ಗೆ 8.30ರಿಂದ 10.30ರವರೆಗೆ ಮಾಣೆಕ್ ಶಾ ಮೈದಾನದ ಸುತ್ತ ಸಂಚಾರ ನಿರ್ಬಂಧಿಸಲಾಗಿದೆ. ಕಬ್ಬನ್‌ ರಸ್ತೆ, ಕಾಮರಾಜ ರಸ್ತೆ, ಬಿಆರ್‌ವಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿಲ್ಲ.

ಪರ್ಯಾಯ ಮಾರ್ಗಗಳು:
ಇನ್ಫೆಂಟ್ರಿ ರಸ್ತೆಯಿಂದ ಮಣಿಪಾಲ್‌ ಸೆಂಟರ್‌ ಕಡೆಗೆ ಸಂಚರಿಸುವ ವಾಹನಗಳು, ಸಫೀನಾ ಪ್ಲಾಜಾದಲ್ಲಿ ಎಡತಿರುವು ಪಡೆದು, ಮೈನ್‌ಗಾರ್ಡ್‌ ರಸ್ತೆ, ಆಲೀಸ್‌ ಸರ್ಕಲ್, ಡಿಸ್ಸೆನ್ಸರಿ ರಸ್ತೆ, ಕಾಮರಾಜ ರಸ್ತೆ, ಡಿಕನ್ಸನ್‌ ರಸ್ತೆ ಜಂಕ್ಷನ್‌ನಲ್ಲಿ ಬಲಕ್ಕೆ ತಿರುವು ಪಡೆದು, ಕಬ್ಬನ್‌ ರಸ್ತೆಯ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬೇಕು.

ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ, ಕಬ್ಬನ್ ಜಂಕ್ಷನ್​​ವರೆಗೆ, ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular