ಬೆಂಗಳೂರು: ಸಾರ್ವಜನಿಕರ ಸುಗಮ ಸಂಚಾರ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಸಂಚಾರ ವಿಭಾಗವು ಸೆಪ್ಟೆಂಬರ್ 4, 2026ರಿಂದ ನಗರದ ಪ್ರಮುಖ ಎಲಿವೇಟೆಡ್ ಕಾರಿಡಾರ್‌ಗಳು ಹಾಗೂ ಫ್ಲೈಓವರ್‌ಗಳಲ್ಲಿ ಕೆಲವು ವರ್ಗದ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದೆ.
ಬಿಜಿಎಸ್ ಫ್ಲೈಓವರ್, ಪೀಣ್ಯ ಎಲಿವೇಟೆಡ್ ಕಾರಿಡಾರ್, ಸಿಲ್ಕ್ ಬೋರ್ಡ್–ರಾಗಿಗುಡ್ಡ ಡಬಲ್ ಡೆಕ್ಕರ್ ಫ್ಲೈಓವರ್ ಹಾಗೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಎಲಿವೇಟೆಡ್ ಕಾರಿಡಾರ್‌ಗಳಲ್ಲಿ ಈ ನಿರ್ಬಂಧ ಜಾರಿಗೆ ಬರಲಿದೆ.
ಯಾವ ರಸ್ತೆಯಲ್ಲಿ ಯಾವ ವಾಹನಗಳಿಗೆ ನಿರ್ಬಂಧ?
1. ಬಿಜಿಎಸ್ ಫ್ಲೈಓವರ್
-
ಭಾರಿ ಸರಕು ಸಾಗಣೆ ವಾಹನಗಳಿಗೆ 24 ಗಂಟೆಯೂ ನಿರ್ಬಂಧ.
-
ಇತರೆ ಸರಕು ಸಾಗಣೆ ವಾಹನಗಳು ಹಾಗೂ ಮೂರು ಚಕ್ರದ ಗೂಡ್ಸ್ ಆಟೋಗಳಿಗೆ ಬೆಳಗ್ಗೆ 7ರಿಂದ 11ರವರೆಗೆ ಮತ್ತು ಸಂಜೆ 4ರಿಂದ ರಾತ್ರಿ 10ರವರೆಗೆ ನಿರ್ಬಂಧ.
2. ಪೀಣ್ಯ ಎಲಿವೇಟೆಡ್ ಕಾರಿಡಾರ್
-
ಪ್ರಯಾಣಿಕರ ಆಟೋರಿಕ್ಷಾ ಹಾಗೂ ತ್ರಿಚಕ್ರ ಗೂಡ್ಸ್ ಆಟೋಗಳಿಗೆ 24 ಗಂಟೆಯೂ ನಿರ್ಬಂಧ.
-
ಭಾರಿ ಹಾಗೂ ಮಧ್ಯಮ ಸರಕು ವಾಹನಗಳಿಗೆ ಬೆಳಗ್ಗೆ 7ರಿಂದ 11ರವರೆಗೆ ಮತ್ತು ಸಂಜೆ 4ರಿಂದ ರಾತ್ರಿ 10ರವರೆಗೆ ನಿರ್ಬಂಧ.
3. ಡಬಲ್ ಡೆಕ್ಕರ್ ಫ್ಲೈಓವರ್ (ಸಿಲ್ಕ್ ಬೋರ್ಡ್–ರಾಗಿಗುಡ್ಡ)
-
ಭಾರಿ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ 24 ಗಂಟೆಯೂ ನಿರ್ಬಂಧ.
4. ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಎಲಿವೇಟೆಡ್ ಕಾರಿಡಾರ್
(ಸಂಜೀವ ನಗರ ಕ್ರಾಸ್‌ನಿಂದ ವಿದ್ಯಾಶಿಲ್ಪ ಜಂಕ್ಷನ್‌ವರೆಗೆ)
-
ದ್ವಿಚಕ್ರ ವಾಹನಗಳಿಗೆ 24 ಗಂಟೆಯೂ ನಿರ್ಬಂಧ.
-
ಆಟೋರಿಕ್ಷಾಗಳಿಗೂ 24 ಗಂಟೆಯೂ ನಿರ್ಬಂಧ.
-
ಎಲ್ಲಾ ರೀತಿಯ ಸರಕು ಸಾಗಣೆ ವಾಹನಗಳಿಗೆ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ನಿರ್ಬಂಧ.
ಸಾರ್ವಜನಿಕರಿಗೆ ಮನವಿ
ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಂಚಾರ ಪೊಲೀಸ್ ವಿಭಾಗವು ಈ ಪ್ರದೇಶಗಳಲ್ಲಿ ಸಿಸಿಟಿವಿ ಕಣ್ಗಾವಲು ಇರಿಸಲಿದೆ.
ಹೀಗಾಗಿ ವಾಹನ ಸವಾರರು ಸಂಚಾರ ನಿರ್ಬಂಧಗಳನ್ನು ಗಮನಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

