BIG NEWS: ಬೆಂಗಳೂರಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲೆ, ಕೈಗಾರಿಕೆ ಸಮಯ ಬದಲಾವಣೆ ಸೇರಿ ಅಗತ್ಯ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಹೈಕೋರ್ಟ್ ಸರ್ಕಾರಕ್ಕೆ ಸಲಹೆ ನೀಡಿದೆ. ಶಾಲೆಗಳು, ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆಗೆ ಸಲಹೆ ನೀಡಲಾಗಿದೆ.

ಶಾಲೆಗಳು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ಕಂಪನಿಗಳ ಪ್ರತಿನಿಧಿಗಳು, ಸಂಬಂಧಿಸಿದವರ ಸಭೆ ಕರೆದು ಚರ್ಚೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ೀ ಕುರಿತಾಗಿ ಸೂಚನೆ ನೀಡಿದೆ. ಮೆಟ್ರೋ ಮಾರ್ಗ ವಿಸ್ತರಣೆ, ಶಾಲೆ, ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಆರು ವಾರಗಳಲ್ಲಿ ಪ್ರಗತಿ ವರದಿ, ಅನುಪಾಲನಾ ವರದಿ ಸಲ್ಲಿಸಲು ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read