ಬೆಂಗಳೂರು : ಮೂರು ತಿಂಗಳಿನಲ್ಲಿ ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್( G Parameshwar) ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು ಬೆಂಗಳೂರು ಟ್ರಾಫಿಕ್ ಬಹಳ ಕೆಟ್ಟದ್ದು, ಇದರಿಂದ ಭಾರಿ ತೊಂದರೆಯಾಗುತ್ತಿದೆ ಎಂಬ ದೂರು ಇದೆ. ಈ ಹಿನ್ನೆಲೆ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಪೊಲೀಸ್ ಇಲಾಖೆ ಜನಸ್ನೇಹಿಯಾಗಬೇಕು, ಪೊಲೀಸ್ ಸಿಬ್ಬಂದಿಗೆ ಹಿರಿಯ ಅಧಿಕಾರಿಗಳು ತಿಳಿ ಹೇಳಬೇಕು. ಎಲ್ಲಾ ಠಾಣೆಗಳಲ್ಲಿ ಕೂಡ ದೂರು ಸ್ವೀಕರಿಸಬೇಕು, ದೂರು ಸ್ವೀಕರಿಸಲ್ಲ ಎಂಬ ದೂರುಗಳು ಕೇಳಿ ಬರಬಾರದು ಎಂದರು.
You Might Also Like
TAGGED:Parameshwar