ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದು, ಈ ಬೆನ್ನಲ್ಲೇ ಕೆಎಸ್ ಸಿ ಎ ಕಾರ್ಯದರ್ಶಿ, ಖಜಾಂಚಿ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ನಿನ್ನೆ ತಡರಾತ್ರಿ ಈ ಕಾರ್ಯಾಚರಣೆ ನಡೆದಿದ್ದು, ಕಾರ್ಯದರ್ಶಿ ಶಂಕರ್ ಹಾಗೂ ಖಜಾಂಚಿ ಜಯರಾಮ್, ಮನೆ ಮೇಲೂ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಆರ್ ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಿದೆ.

