HomeKarnatakaBIG NEWS: ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಬೃಹತ್ ಮರ; ಚಾಲಕನ ಸ್ಥಿತಿ ಗಂಭಿರ

BIG NEWS: ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಬೃಹತ್ ಮರ; ಚಾಲಕನ ಸ್ಥಿತಿ ಗಂಭಿರ

ಬೆಂಗಳೂರು: ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರವೊಂದು ಬಿದ್ದು ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ರಿಚ್ಮಂಡ್ ಸರ್ಕಲ್ ನಲ್ಲಿ ನಡೆದಿದೆ.

ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಆಟೋ ಮೇಲೆ ಬಿರುಗಾಳಿಗೆ ಏಕಾಏಕಿ ಮರ ಮುರಿದು ಬಿದ್ದಿದೆ. ಆಟೋ ಸಂಪೂರ್ಣ ಜಖಂಗೊಂಡಿದ್ದು, ಆಟೋ ಚಾಲಕನ ಎರಡೂ ಕಾಲುಗಳು ಮುರಿದಿವೆ. ಚಾಲಕ ದಿವಾಕರ್ ಎಂಬುವವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅದೃಷ್ಟವಶಾತ್ ಆಟೋದಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸುವಂತೆ ಸರ್ಕಾರ ಆದೇಶ ನೀಡಿದ್ದರೂ ಬಿಬಿಎಂಪಿ ಒಣ ಮರಗಳನ್ನು ತೆರವು ಮಾಡದಿರುವುದೇ ಇಂತಹ ಅನಾಹುತಕ್ಕೆ ಕಾರಣವಾಗಿದೆ. ಬಿಬಿಎಂಪಿ ನಿರ್ಲಕ್ಷ್ಯದಿಂದಲೇ ಅವಘಡ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular