HomeKarnatakaBREAKING : ಬೆಂಗಳೂರಿನಲ್ಲಿ ಘೋರ ದುರಂತ : ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು...

BREAKING : ಬೆಂಗಳೂರಿನಲ್ಲಿ ಘೋರ ದುರಂತ : ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ

ಬೆಂಗಳೂರು : ಬೆಂಗಳೂರಿನಲ್ಲಿ ಘೋರದುರಂತವೊಂದು ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ತಾಲೂಕಿನ ಬ್ಯಾಡರಹಳ್ಳಿಯ ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದ ಪರಿಣಾಮ ಈ ದುರಂತ ಸಂಭವಿಸಿದ್ದು,  ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 20 ಜನರಿಗೆ ಗಂಭೀರವಾಗಿಗೊಂಡಿದ್ದಾರೆ. ಕಟ್ಟಡದ ಅವಶೇಷಗಳ ಅಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸೇಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸದ್ಯ ಗಾಯಾಳುಗಳಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular