HomeKarnataka2 ಸಾವಿರ ಸಹಾಯಕ ಪ್ರಾಧ್ಯಾಪಕರು ಸೇರಿ 72 ಸಾವಿರ ಹುದ್ದೆಗಳಿಗೆ ನೇಮಕಾತಿ: 90 ಸಾವಿರ ಅಭ್ಯರ್ಥಿಗಳಿಗೆ...

2 ಸಾವಿರ ಸಹಾಯಕ ಪ್ರಾಧ್ಯಾಪಕರು ಸೇರಿ 72 ಸಾವಿರ ಹುದ್ದೆಗಳಿಗೆ ನೇಮಕಾತಿ: 90 ಸಾವಿರ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಎರಡು ಸಾವಿರ ಸಹಾಯಕ ಪ್ರಾಧ್ಯಾಪಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗುತ್ತದೆ. ಕೆಇಎ ಮೂಲಕ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿನ 72 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 90 ಸಾವಿರ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಉಚಿತ ತರಬೇತಿ ನೀಡಲಾಗುತ್ತಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ 100 ದಿನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ‘ಮುಖ್ಯಮಂತ್ರಿಯವರ ವಿದ್ಯಾರ್ಥಿ ಸಹಾಯ ಹಸ್ತ’ ಯೋಜನೆ ಜಾರಿಮಾಡಲಾಗುತ್ತಿದೆ. ಇದಕ್ಕೆ ಗುರುವಾರ ಚಾಲನೆ ನೀಡಲಾಗುತ್ತಿದೆ. ನೇಮಕಾತಿ ಸ್ಪರ್ಧಾರ್ಥಿಗಳು ಸೇವಾಸಿಂಧು ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯಾದ ನಂಬರ್ ಬಳಸಿ ಆನ್‌ಲೈನ್ ತರಗತಿಗಳಿಗೆ ಹಾಜರಾಗಬಹುದು ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಬ್ಬ ಅಭ್ಯರ್ಥಿಯು ಮೂರು ಪರೀಕ್ಷೆಗಳಿಗೆ ನೋಂದಣಿ ಮಾಡಿಕೊಳ್ಳಬಹುದು. ಯುಪಿಎಸ್‌ಸಿ, ಕೆಪಿಎಸ್‌ಸಿ ಮತ್ತು ಕೆಇಎ ನಡೆಸುವ ಎಸ್‌ಡಿಎ, ಎಫ್‌ಡಿಎ, ಗ್ರಾಮ ಆಡಳಿತಾಧಿಕಾರಿ, ಕೆಎಎಸ್, ಯುಪಿಎಸ್ ಪ್ರಿಲಿಮ್ಸ್ ಸೇರಿ ಹಲವು ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ ವಿವಿಧೆಡೆ ನೂರಾರು ತರಬೇತಿ ಕೇಂದ್ರಗಳಿದ್ದು, ಟೆಂಡ‌ರ್ ಕರೆಯಲಾಗಿದೆ. ಮುಂದಿನ 2ರಿಂದ 3 ದಿನಗಳಲ್ಲಿ ಅಂತಿಮಗೊಳಿಸಿ ತರಬೇತಿ ಆರಂಭಿಸಲಾಗುವುದು. ಇದಕ್ಕಾಗಿ ಪ್ರತಿ ಅಭ್ಯರ್ಥಿಗೆ ಒಂದು ಸಾವಿರದಂತೆ 9 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಮೂರು ತಿಂಗಳ ತರಬೇತಿ ಇದ್ದು, ನೇರವಾಗಿ ಕೋಚಿಂಗ್ ಕೇಂದ್ರಕ್ಕೆ ಪಾವತಿ ಮಾಡಲಾಗುವುದು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಆಯುಕ್ತ ಹೆಚ್‌.ಎನ್. ಗೋಪಾಲಕೃಷ್ಣ ಹಾಗೂ ನಿರ್ದೇಶಕಿ ಶೋಭಾ ಇದ್ದರು.

ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗಾಗಿ ನಮ್ಮ ಉನ್ನತ ಶಿಕ್ಷಣ ಇಲಾಖೆ ಕೈಗೊಂಡಿರುವ ಎರಡು ಮಹತ್ವದ ನಿರ್ಧಾರಗಳನ್ನು ಹಂಚಿಕೊಂಡಿದ್ದಾರೆ. ನಮ್ಮ ಯುವಜನತೆಯ ಉಜ್ವಲ ಭವಿಷ್ಯದ ಕನಸುಗಳಿಗೆ ಬಲ ತುಂಬುವ ಉದ್ದೇಶದಿಂದ, ರಾಜ್ಯದ ಸುಮಾರು 90,000 ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ. ಈ ತರಬೇತಿಗೆ ಸುಲಭವಾಗಿ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಆನ್‌ಲೈನ್ ಪೋರ್ಟಲ್ ಅನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಾಯಿತು.

ಇದರ ಜೊತೆಗೆ, ಗ್ರಾಮೀಣ ಪ್ರತಿಭೆಗಳಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ಮತ್ತು ಪ್ರಾತಿನಿಧ್ಯ ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ 7.5% ಮೀಸಲಾತಿ ನೀಡುವ ಐತಿಹಾಸಿಕ ನಿರ್ಧಾರವನ್ನು ಘೋಷಿಸಲಾಗಿದೆ. ಗುಣಮಟ್ಟದ ಶಿಕ್ಷಣ ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular