HomeKarnatakaಸ್ವಾತಂತ್ರ್ಯ ಹಬ್ಬದ ಹಿನ್ನೆಲೆ: ಭದ್ರತೆ, ಸಂಚಾರ ನಿರ್ವಹಣೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಸ್ವಾತಂತ್ರ್ಯ ಹಬ್ಬದ ಹಿನ್ನೆಲೆ: ಭದ್ರತೆ, ಸಂಚಾರ ನಿರ್ವಹಣೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು-ಆಗಸ್ಟ್ 15ರಂದು ಬೆಂಗಳೂರಿನ ಐತಿಹಾಸಿಕ ವಿಧಾನಸೌಧದ ಆವರಣದಲ್ಲಿ ನಡೆಯಲಿರುವ ರಾಜ್ಯದ ಮೊದಲ ಸಾರ್ವಜನಿಕ ‘ಸ್ವಾತಂತ್ರ್ಯ ಹಬ್ಬ–2026’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗೃಹ, ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸ್ವಾತಂತ್ರ್ಯ ಹಬ್ಬದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಭದ್ರತೆ, ಸಂಚಾರ ವ್ಯವಸ್ಥೆ, ಸಾರ್ವಜನಿಕರ ಪ್ರವೇಶ ಮತ್ತು ನಿರ್ಗಮನ, ವಾಹನ ನಿಲುಗಡೆ ಹಾಗೂ ಜನದಟ್ಟಣೆ ನಿರ್ವಹಣೆ ಸೇರಿದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಯಕ್ರಮದ ವಿಶೇಷ ಅಂಶಗಳು

ವಿಧಾನಸೌಧದಲ್ಲಿ ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 10ರವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ‘ದಿ ಪೀಪಲ್ಸ್ ಇಂಡಿಯಾ ಪೆರೇಡ್’, ವಿಧಾನಸೌಧದ ವಿಶೇಷ ಪ್ರವಾಸ, ಮಕ್ಕಳಿಗಾಗಿ ‘ಮಕ್ಕಳ ಮೇಳ’, ರಸಪ್ರಶ್ನೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಕಚೇರಿ, ವಿವಿಧ ಜಿಲ್ಲೆಗಳ ಆಹಾರ ಮತ್ತು ಕರಕುಶಲ ಪ್ರದರ್ಶನಗಳು ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿವೆ.

ಸಂಜೆ ಸಂಗೀತ ಕಾರ್ಯಕ್ರಮ ಹಾಗೂ ರಾತ್ರಿ ಪಟಾಕಿ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಸಾಧ್ಯತೆ ಇರುವುದರಿಂದ ವಿಶೇಷ ಗಮನಹರಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾರ್ವಜನಿಕರ ಸುರಕ್ಷತೆಗೆ ಒತ್ತು

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಸುಗಮ ಸಂಚಾರ ವ್ಯವಸ್ಥೆ, ಪಾದಚಾರಿಗಳ ಸುರಕ್ಷತೆ, ತುರ್ತು ಸೇವೆಗಳಿಗೆ ಅಗತ್ಯ ವ್ಯವಸ್ಥೆ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ಸಮರ್ಪಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ ಸಚಿವರು, ಕಾರ್ಯಕ್ರಮದ ವೇಳೆ ಸಾರ್ವಜನಿಕರ ಸುರಕ್ಷತೆಗೆ ಯಾವುದೇ ರೀತಿಯ ಲೋಪವಾಗದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು.

ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಪೊಲೀಸ್ ಇಲಾಖೆ, ಜಿಬಿಎ ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular