ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಿಯಕರನೇ ಪ್ರೇಯಸಿಯನ್ನು ಹತ್ಯೆ ಮಾಡಿರುವ ಘಟನೆ ಬೆನ್ನಲ್ಲೇ ಮತ್ತೊಂದು ಒಂಟಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಂಗಸಂದ್ರದ ಮುನಿಯಪ್ಪ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಉತ್ತರ ಭಾರತ ಮೂಲದ ಕೃಷ್ಣ ಬರ್ಮನ್ (40) ಕೊಲೆಯಾದ ಮಹಿಳೆ.
ಮೃತ ಮಹಿಳೆ ಮುನಿಯಪ್ಪ ಲೇಔಟ್‌ನಲ್ಲಿ ಸಣ್ಣ ರೂಮ್ ಮಾಡಿಕೊಂಡಿದ್ದು, ಅಡುಗೆ ಕೆಲಸ ಮಾಡಿಕೊಂಡು ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದರು. ಪರಿಚಯಸ್ಥರೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಬೊಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

