HomeKarnatakaBREAKING: ಬೆಂಗಳೂರಲ್ಲಿ ಕಟ್ಟಡದ 4ನೇ ಮಹಡಿಯಿಂದ ಬಿದ್ದು ಯುವಕ ಸಾವು

BREAKING: ಬೆಂಗಳೂರಲ್ಲಿ ಕಟ್ಟಡದ 4ನೇ ಮಹಡಿಯಿಂದ ಬಿದ್ದು ಯುವಕ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಕೋನಪ್ಪನ ಅಗ್ರಹಾರದ ಲಕ್ಷ್ಮಿ ವೆಂಕಟೇಶ ಪಿಜಿ ಕಟ್ಟಡದಲ್ಲಿ ಘಟನೆ ನಡೆದಿದೆ.

ತಮಿಳುನಾಡು ಮೂಲದ 28 ವರ್ಷದ ವಿಷ್ಣು ಮೃತ ದುರ್ದೈವಿ ಎಂದು ಹೇಳಲಾಗಿದೆ. ಪಿಜಿ ಕಟ್ಟಡದ ಮೇಲಿಂದ ಹಾರಿ ವಿಷ್ಣು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular