HomeKarnatakaಬೆಂಗಳೂರಿನ ವಿದ್ಯಾರಣ್ಯಪುರದಿಂದ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ

ಬೆಂಗಳೂರಿನ ವಿದ್ಯಾರಣ್ಯಪುರದಿಂದ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ವಿದ್ಯಾರಣ್ಯಪುರದಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ಬರೋಬ್ಬರಿ 8 ತಿಂಗಳ ಬಳಿಕ ಪತ್ತೆಯಾಗಿರುವ ಘಟನೆ ನಡೆದಿದೆ.

ತನಿಷ್ಕಾ ಮತ್ತು ತೇಜಸ್ವಿನಿ ಎಂಬ ಇಬ್ಬರು ಯುವತಿಯರನ್ನು ಕೊನೆಗೂ ಸಿಐಡಿ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರು ಯುವತಿಯರನ್ನು ಪೊಲೀಸರು ಇಂದು ಹೈಕೋರ್ಟ್ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತನಿಷ್ಕಾ ದ್ವಿತೀಯ ಪಿಯುಸಿ ಹಾಗೂ ತೇಜಸ್ವಿನಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇಬ್ಬರೂ ಕಳೆದ ಜನವರಿ 31ರಂದು ವಿದ್ಯಾರಣ್ಯಪುರದಿಂದ ನಾಪತ್ತೆಯಾಗಿದ್ದರು. ಯುವತಿಯರು ಮೊಬೈಲ್ ಫೋನ್, ಎಟಿಎಂ ಕಾರ್ಡ್ ಗಳನ್ನು ಕೂಡ ಬಳಸುತ್ತಿರಲಿಲ್ಲ. ಇದರಿಂದಾಗಿ ಯುವತಿಯರನ್ನು ಪತ್ತೆ ಹಚ್ಚುವುದು ಸವಾಲಾಗಿ ಪರಿಣಮಿಸಿತ್ತು.

ಯುವತಿಯರು ನಾಪತ್ತೆಯಾದ ಬೆನ್ನಲ್ಲೇ ಕುಟುಂಬದವರು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಪೊಲೀಸರು ಸಿಸಿಟಿವಿ ಕ್ಯಾಮರಾ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಎಲ್ಲಾ ವಿಧಗಳಿಂದಲೂ ಹುಡುಕಾಟ ನಡೆಸಿದ್ದರು. ಆದರೆ ಎಲ್ಲಿಯೂ ಯುವತಿಯರು ಪತ್ತೆಯಾಗಿರಲಿಲ್ಲ.

ಯುವತಿಯರ ಸುಳಿವು ಸಿಗದಿದ್ದಾಗ ತನಿಷ್ಕಾ ಕುಟುಂಬದವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ತನಿಖೆಯ ಪ್ರಗತಿ ಹಾಗೂ ಯುವತಿಯರ ಪತ್ತೆ ಕುರಿತು ನ್ಯಾಯಾಲಯದ ಗಮನಕ್ಕೆ ತರಲಾಗಿತ್ತು. ಸುಮಾರು ಐದಾರು ತಿಂಗಳ ಬಳಿಕ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಹೈಕೋರ್ಟ್ ನಿರ್ದೇಶನದಂತೆ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಕೈಗೆತ್ತಿಕೊಂಡು ಕಳೆದ ಮೂರು ತಿಂಗಳಿಂದ ಯುವತಿಯರಿಗಾಗಿ ತೀವ್ರ ಶೋಧ ನಡೆಸಿದ್ದರು.

ಇಬ್ಬರೂ ಯುವತಿಯರು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ಸುಳಿವು ಸಿಐಡಿ ಅಧಿಕಾರಿಗಳಿಗೆ ತನಿಖೆ ವೇಳೆ ದೊರೆತಿತ್ತು. ಅಲ್ಲಿ ಇಬ್ಬರೂ ಒಂದು ಮಗುವಿನೊಂದಿಗೆ ಆಟವಾಡುತ್ತಿದ್ದ ವೇಳೆ, ಮಗುವಿನ ತಾಯಿ ಇಬ್ಬರ ಜೊತೆ ಸೆಲ್ಫಿ ತೆಗೆದುಕೊಂಡಿದ್ದರು. ಈ ಫೋಟೋ ಹಾಗೂ ಲಭ್ಯವಾದ ಮಾಹಿತಿಯನ್ನು ಆಧರಿಸಿ ತನಿಖೆ ಮುಂದುವರಿಸಿದರೂ, ಬಳಿಕ ಯುವತಿಯರ ಕುರಿತು ಯಾವುದೇ ಸ್ಪಷ್ಟ ಸುಳಿವು ಸಿಕ್ಕಿರಲಿಲ್ಲ.

ತನಿಖೆ ಮುಂದುವರಿದ ಸಂದರ್ಭದಲ್ಲಿ, ತನಿಷ್ಕಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಬಳಸಲು ಮುಂದಾಗಿದ್ದಳು. ಈ ವೇಳೆ ಆಧಾರ್ ಸಂಖ್ಯೆಯ ಬಳಕೆಯ ಕುರಿತು ಸರ್ವಿಸ್ ಪ್ರೊವೈಡರ್‌ನಿಂದ ಸಿಐಡಿಗೆ ಮಾಹಿತಿ ಲಭ್ಯವಾಗಿದೆ. ಈ ಮಾಹಿತಿಯ ಆಧಾರದ ಮೇಲೆ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಇಬ್ಬರೂ ಯುವತಿಯರು ಪತ್ತೆಯಾಗಿದ್ದಾರೆ.

ತನಿಖೆಯ ವೇಳೆ ಲಭ್ಯವಾದ ಮಾಹಿತಿಯ ಪ್ರಕಾರ, ಮಲೆ ಮಹದೇಶ್ವರ ಬೆಟ್ಟದಲ್ಲಿದ್ದ ಸಂದರ್ಭದಲ್ಲಿ ತನಿಷ್ಕಾಗೆ ಕನಕಪುರ ತಾಲೂಕಿನ ಯುವಕನೊಬ್ಬನ ಪರಿಚಯವಾಗಿತ್ತು. ಯುವಕನ ಕುಟುಂಬದ ವಿಚಾರಣೆಯ ಸಂದರ್ಭದಲ್ಲಿ ತನಿಷ್ಕಾ ತಾನು ಹಾಗೂ ತೇಜಸ್ವಿನಿ ಸಹೋದರಿಯರು, ತಮ್ಮ ಕುಟುಂಬದಲ್ಲಿ ತಂದೆ-ತಾಯಿ ಸೇರಿದಂತೆ ಯಾರೂ ಇಲ್ಲ ಎಂದು ಹೇಳಿದ್ದಳು. ಬಳಿಕ ಇಬ್ಬರೂ ಆ ಯುವಕನೊಂದಿಗೆ ತೆರಳಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ನಂತರ ತನಿಷ್ಕಾ ಆ ಯುವಕನನ್ನು ಮದುವೆಯಾಗಿದ್ದಾಳೆ. ಮದುವೆಯ ಬಳಿಕ ಇಬ್ಬರೂ ಒಟ್ಟಿಗೆ ವಾಸಿಸುತ್ತಿದ್ದು, ತೇಜಸ್ವಿನಿಯನ್ನು ತನ್ನ ತಂಗಿ ಎಂದು ಪರಿಚಯಿಸಿ ತಮ್ಮೊಂದಿಗೇ ಇರಿಸಿಕೊಂಡಿದ್ದಳು ಎಂಬುದು ಸಿಐಡಿ ತನಿಖೆಯಲ್ಲಿ ಬಯಲಾಗಿದೆ. ಮನೆಯಿಂದ ಕಾಲೇಜಿಗೆ ಹೋಗುತ್ತೇವೆ ಎಂದು ಹೇಳಿ ಹೋಗಿದ್ದ ಯುವತಿಯರು ಬಳಿಕ ನಾಪತ್ತೆಯಾಗಿದ್ದರು. ಇದೀಗ ಎಂಟು ತಿಂಗಳ ಬಳಿಕ ಪತ್ತೆಯಾಗಿದ್ದಾರೆ. ತನಿಷ್ಕಾ ಮದುವೆಯಾಗಿದ್ದು, ಸದ್ಯ ಗರ್ಭಿಣಿಯಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

ಎಂಟು ತಿಂಗಳ ಬಳಿಕ ಇಬ್ಬರೂ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ಇದೀಗ ಮತ್ತಷ್ಟು ತಿರುವು ಪಡೆಯುತ್ತಿದೆ. ಯುವತಿಯರು ಇದ್ದಕ್ಕಿದ್ದಂತೆ ನಾಅಪತ್ತೆಯಾಗಲು ಕಾರಣವೇನು? ಇಷ್ಟು ಯ್ತಿಂಗಳು ಅವರು ಎಲ್ಲಿದ್ದರು? ಕೆಲ ದಿನಗಳಲ್ಲಿ ಪರಿಚಿತನಾದ ಎಂಬ ಕಾರಣಕ್ಕೆ ಯುವಕನನ್ನು ಮದುವೆಯಾಗಿರುವ ವಿಚಾಅರ ಇವೆಲ್ಲವೂ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದು, ನಾಪತ್ತೆಯ ಹಿಂದಿನ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿರುವ ಸಿಐಡಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular