HomeLatest Newsಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಬೆಂಗಳೂರಿನಲ್ಲಿ ಜೊಂಬಿ ಡ್ರಗ್ ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿ...

ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಬೆಂಗಳೂರಿನಲ್ಲಿ ಜೊಂಬಿ ಡ್ರಗ್ ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆತಂಕ ಮೂಡಿಸಿದ್ದ ಜೊಂಬಿ ಡ್ರಗ್ (Zombie Drug) ಕುರಿತಾದ ವಿಡಿಯೋ ಕೇವಲ ಸುಳ್ಳು ಸುದ್ದಿ ಎಂದು ಬೆಂಗಳೂರು ನಗರ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ದಾರಿ ತಪ್ಪಿಸುವ ವಿಡಿಯೋವನ್ನು ಹರಡಿದ ವ್ಯಕ್ತಿಯನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ.

ಏನಿದು ಘಟನೆ?

ಬಾಗಲೂರಿನ ನಿಟ್ಟೆ ಕಾಲೇಜು ಸಮೀಪ ವ್ಯಕ್ತಿಯೊಬ್ಬ ಅಸಹಜವಾಗಿ ವರ್ತಿಸುತ್ತಿರುವ ವಿಡಿಯೋವನ್ನ ಕಿಡಿಗೇಡಿಯೊಬ್ಬ ಚಿತ್ರೀಕರಿಸಿದ್ದ. ಅಷ್ಟೇ ಅಲ್ಲದೆ, ಇದು ಅಪಾಯಕಾರಿ ಜೊಂಬಿ ಡ್ರಗ್ ಪ್ರಭಾವ ಎಂದು ಕ್ಯಾಪ್ಷನ್ ಕೊಟ್ಟು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ. ಈ ವಿಡಿಯೋ ನೋಡಿ ಪೋಷಕರು ಮತ್ತು ವಿದ್ಯಾರ್ಥಿಗಳು ಅಕ್ಷರಶಃ ಬೆಚ್ಚಿಬಿದ್ದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರ ಮಿಂಚಿನ ಕಾರ್ಯಾಚರಣೆ:

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಬೆಂಗಳೂರು ನಗರ ಪೊಲೀಸರು ತನಿಖೆ ಕೈಗೆತ್ತಿಕೊಂಡರು. ವಿಡಿಯೋದಲ್ಲಿರುವ ವ್ಯಕ್ತಿಗೂ ಡ್ರಗ್ಸ್‌ಗೂ ಯಾವುದೇ ಸಂಬಂಧವಿಲ್ಲ, ಇದು ಕೇವಲ ದಾರಿ ತಪ್ಪಿಸುವ ಕೃತ್ಯ ಎಂದು ಪತ್ತೆಹಚ್ಚಿದ್ದಾರೆ.ವಿಡಿಯೋ ಹರಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಿಎನ್ಎಸ್ (BNS) ಮತ್ತು ಐಟಿ ಕಾಯ್ದೆಯಡಿ ಆರೋಪಿಯ ಮೇಲೆ ಗಂಭೀರ ಕೇಸ್ ಜಡಿಯಲಾಗಿದೆ.

ಪೊಲೀಸರ ಸ್ಟ್ರಿಕ್ಟ್ ವಾರ್ನಿಂಗ್:

ಲೈಕ್ಸ್ ಮತ್ತು ವ್ಯೂಸ್‌ಗಾಗಿ ಸುಳ್ಳು ಸುದ್ದಿ ಹರಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದರೆ ಕಠಿಣ ಶಿಕ್ಷೆ ಗ್ಯಾರಂಟಿ ಎಂದು ಪೊಲೀಸರು ಎಚ್ಚರಿಸಿದ್ದಾರೆ. ಯಾವುದೇ ವಿಡಿಯೋ ಶೇರ್ ಮಾಡುವ ಮುನ್ನ ಅದರ ಸತ್ಯಾಸತ್ಯತೆ ಪರಿಶೀಲಿಸಿ.ಇಂತಹ ಸುಳ್ಳು ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್‌ಗಳಲ್ಲಿ ಹಂಚಿಕೊಳ್ಳಬೇಡಿ. ಈ ಮಾಹಿತಿ ತಿಳಿಯಲು ಈ ಪೋಸ್ಟ್ ಅನ್ನು ಈಗಲೇ ಶೇರ್ ಮಾಡಿ

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular