HomeKarnatakaಬೆಂಗಳೂರಿನಲ್ಲಿ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ: ರೌಡಿಶೀಟರ್ ಶಬ್ಬೀರ್ ಕೊಲೆಯ ಪ್ರತಿಕಾರವೇ?

ಬೆಂಗಳೂರಿನಲ್ಲಿ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ: ರೌಡಿಶೀಟರ್ ಶಬ್ಬೀರ್ ಕೊಲೆಯ ಪ್ರತಿಕಾರವೇ?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೆಡಿಕಲ್ ಶಾಪ್ ಮಾಲೀಕರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಮಡಿವಾಳದ ಮುಖ್ಯರಸ್ತೆಯಲ್ಲಿ ನಡೆದಿದೆ.

ಸಾರ್ವಜನಿಕರ ಎದುರಲ್ಲೇ ನಡು ರಸ್ತೆಯಲ್ಲಿ ಮೆಡಿಕಲ್ ಶಾಪ್ ಮಾಲೀಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಮಂಗಮ್ಮನಪಾಳ್ಯದ ನಿವಾಸಿ, ಮೆಡಿಕಲ್ ಶಾಪ್ ನಡೆಸುತ್ತಿದ್ದ ಸುಹೇಲ್ ಕೊಲೆಯಾದ ದುರ್ದೈವಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶನಿವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಸುಹೇಲ್ ಮಡಿವಾಳದಿಂದ ಕೊರಮಂಗಲ ಕಡೆಗೆ ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಸಿಗ್ನಲ್ ಬಳಿ ಟ್ರಾಫಿಕ್ ಜಾಮ್‌ನಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದಾಗ, ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಏಕಾಏಕಿ ತಲ್ವಾರ್‌ಗಳಿಂದ ಅವರ ಮೇಲೆ ಹಲ್ಲೆ ನಡೆಸಿದೆ. ಸಾರ್ವಜನಿಕರ ಎದುರೇ ಸುಹೇಲ್ ಅವರನ್ನು ಕೊಚ್ಚಿ ಕೊಲೆ ಮಾಡಿದ ಹಂತಕರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

ಬಂಡೆಪಾಳ್ಯದಲ್ಲಿ ಜನವರಿ 13 ರಂದು ರೌಡಿಶೀಟರ್ ಶಬ್ಬೀರ್ ಎಂಬಾತನ ಹತ್ಯೆಯಾಗಿತ್ತು. ಈತನ ಕೊಲೆ ಪ್ರಕರಣದಲ್ಲಿ ಸುಹೇಲ್ ಸಹೋದರರಾದ ಖಲೀಂ, ನಜೀರ್ ಹಾಗೂ ಇನ್ನೊಬ್ಬ ಸಹೋದರ ಆರೋಪಿಗಳಾಗಿದ್ದರು. ಈ ಪೈಕಿ ಖಲೀಂ ಇನ್ನೂ ಜೈಲಿನಲ್ಲಿದ್ದರೆ, ನಜೀರ್ ಒಂದು ತಿಂಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ.

ಸುಹೇಲ್ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಲಿಲ್ಲ. ಮೆಡಿಕಲ್ ಶಾಪ್ ನಡೆಸಿಕೊಂಡು ಸಾಮಾನ್ಯ ಜೀವನ ನಡೆಸುತ್ತಿದ್ದರು. ಸಹೋದರರ ಮೇಲಿನ ಸೇಡಿಗೆ ಶಬ್ಬೀರ್ ಸಹಚರರೇ ಮುಗ್ಧ ಸುಹೇಲ್‌ನನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸಹೋದರನ ಕೊಲೆ ನಡೆದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ನಜೀರ್, ಸುಹೇಲ್ ನನಗೆ ಕೇವಲ ಅಣ್ಣನಾಗಿರಲಿಲ್ಲ, ಅಪ್ಪನ ಸ್ಥಾನದಲ್ಲಿದ್ದ. ಈ ಕೃತ್ಯ ಎಸಗಿದ ಯಾರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಶಪಥ ಮಾಡಿದ್ದಾನೆ. ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಂತಕರ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular