HomeLatest NewsBIG NEWS: ವಿಶ್ವದ ಅತಿ ಹೆಚ್ಚು ಸಂಚಾರ ದಟ್ಟಣೆ ನಗರ ಪಟ್ಟಿಯಲ್ಲಿ ಬೆಂಗಳೂರಿಗೆ 2ನೇ ಸ್ಥಾನ

BIG NEWS: ವಿಶ್ವದ ಅತಿ ಹೆಚ್ಚು ಸಂಚಾರ ದಟ್ಟಣೆ ನಗರ ಪಟ್ಟಿಯಲ್ಲಿ ಬೆಂಗಳೂರಿಗೆ 2ನೇ ಸ್ಥಾನ

ಬೆಂಗಳೂರು: ರಾಜ್ಯ ರಾಜಧಾನಿ, ಐಟಿ ಸಿಟಿ ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ದೇಶಾದ್ಯಂತ ಸದಾಕಾಲ ಸುದ್ದಿಯಾಗುತ್ತಲೇ ಇರುತ್ತದೆ. ಬೆಂಗಳೂರು ಎಂದರೇ ಟ್ರಾಫಿಕ್ ಜಾಅಮ್ ಎಂಬಷ್ಟರ ಮಟ್ಟಿಗೆ ಇಲ್ಲಿನ ಸಂಚಾರ ದಟ್ಟಣೆ ಚರ್ಚೆಯಲ್ಲಿರುತ್ತದೆ. ಆದರೀಗ ಬೆಂಗಳೂರಿನ ಸಂಚಾರದಟ್ಟಣೆ ವಿಶ್ವಮಟ್ಟದಲ್ಲಿಯೂ ಹೆಸರುವಾಸಿಯಾಗಿದೆ. ವಿಶ್ವದ ಅತಿ ಹೆಚ್ಚು ಟ್ರಾಫಿಕ್ ಜಾಮ್ ಇರುವ ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮುಂಚೂಣಿಯಲ್ಲಿದೆ.

ಬೆಂಗಳೂರು ಟ್ರಾಫಿಕ್ ಜಾಮ್ ಸಮಸ್ಯೆ ಈಗ ವಿಶ್ವಮಟ್ಟದಲ್ಲಿ ಸುದ್ದಿಯಾಗಿದೆ. ಟ್ರಾಫಿಕ್ ಸಮಸ್ಯೆಯಲ್ಲಿ ಬೆಂಗಳೂರು ವಿಶ್ವದಲ್ಲೇ ಟಾಪ್ 2 ನಗರವಾಗಿ ಹೊರಹೊಮ್ಮಿದೆ. ವಿಶ್ವದ ಅತಿ ಹೆಚ್ಚು ಟ್ರಾಫಿಕ್ ಇರುವ ನಗರಗಳಲ್ಲಿ ಪುಣೆ, ಮುಂಬೈ ಕೂಡ ಸ್ಥಾನ ಪಡೆದಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೆದರ್ಲೆಂಡ್ಸ್ ಮೂಲದ ‘ಟಾಮ್‌ಟಾಮ್’ ಎಂಬ ಸಂಸ್ಥೆ ಬಿಡುಗಡೆ ಮಾಡಿರುವ 2025ರ ಸಂಚಾರ ಸೂಚ್ಯಂಕ -Traffic Index ವರದಿಯಲ್ಲಿ ವಿಶ್ವದ ಅತಿಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಎರಡನೇ ಸ್ಥಾನ ಪಡೆದಿದೆ.ಅತಿ ಹೆಚ್ಚು ಟ್ರಾಫಿಕ್ ಜಾಮ್ ನಗರದ ಪಟ್ಟಿಯಲ್ಲಿ ಮೆಕ್ಸಿಕೊ ನಗರ ಮೊದಲ ಸ್ಥಾನದಲ್ಲಿದ್ದರೆ, ಭಾರತದ ಸಿಲಿಕಾನ್ ಸಿಟಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ.

ವಿಶ್ವದ ಸಂಚಾರ ದಟ್ಟಣೆ ನಗರ ಪಟ್ಟಿಯಲ್ಲಿ ದುಬೈ ಮೂರನೇ ಸ್ಥಾನದಲ್ಲಿದ್ದು, ಪೊಲ್ಯಾಂಡ್‌ನ ಲೊಡ್ಜ್ ನಗರ ನಾಲ್ಕನೇ ಸ್ಥಾನ ಪಡೆದಿದೆ. ಭಾರತದ ಪುಣೆ ನಗರ ಐದನೇ ಸ್ಥಾನದಲ್ಲಿದ್ದರೆ, ಮುಂಬೈ 18ನೇ ಸ್ಥಾನದಲ್ಲಿದೆ.

2025ರಲ್ಲಿ ಬೆಂಗಳೂರಿನ ಸರಾಸರಿ ಸಂಚಾರ ದಟ್ಟಣೆ ಶೇ 74.4ಕ್ಕೆ ತಲುಪಿದೆ. 2024ರಲ್ಲಿ ಇದು ಶೇ 72.7ರಷ್ಟಿತ್ತು. ಈಗ ಒಂದೇ ವರ್ಷದಲ್ಲಿ ಶೇ 1.7ರಷ್ಟು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ, ರಸ್ತೆ ಮೂಲಸೌಕರ್ಯದ ಒತ್ತಡ ಹಾಗೂ ನಿರಂತರ ಕಾಮಗಾರಿಗಳು ಸಂಚಾರ ದಟ್ಟಣೆಯನ್ನು ಇನ್ನಷ್ಟು ಹೆಚ್ಚಳವಾಗಲು ಕಾರಣ.

ಇನ್ನು ವಾಹನ ಸಂಚಾರದ ಸರಾಸರಿ ವೇಗದಲ್ಲಿ ಬದಲಾವಣೆಯಾಗಿದೆ. 2024ರಲ್ಲಿ ಗಂಟೆಗೆ 16.6 ಕಿಲೋಮೀಟರ್ ಇದ್ದ ಸರಾಸರಿ ವೇಗ, 2025ರಲ್ಲಿ 17.6 ಕಿಲೋಮೀಟರ್‌ಗೆ ಏರಿಕೆಯಾಗಿದೆ. ಆದರೂ ಸಂಚಾರದ ಒತ್ತಡ ಕಡಿಮೆಯಾಗಿಲ್ಲ. 2025ರಲ್ಲಿ 15 ನಿಮಿಷಗಳಲ್ಲಿ ಸರಾಸರಿ 4.4 ಕಿಲೋಮೀಟರ್ ಸಂಚರಿಸಬಹುದು. 2024ರಲ್ಲಿ 4.2 ಕಿಲೋಮೀಟರ್ ಸಂಚರಿಸಬಹುದಾಗಿತ್ತು. ಬೆಂಗಳೂರು ನಗರದಲ್ಲಿ 10 ಕಿಲೋಮೀಟರ್ ದೂರ ಕ್ರಮಿಸಲು ಸರಾಸರಿ 36 ನಿಮಿಷ 9 ಸೆಕೆಂಡ್ ಸಮಯ ಬೇಕಾಗುತ್ತಿದೆ ಎಂದು ವರದಿ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular