HomeLatest Newsಬೆಂಗಳೂರಿನಲ್ಲಿ ಮತ್ತೊಂದು ಅಪಘಾತ: ಹಿಟ್ & ರನ್ ಗೆ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ: ಹಿಟ್ & ರನ್ ಗೆ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. ಹಿಟ್ ಆಂಡ್ ರನ್ ಗೆ ಡೆಲಿವರಿ ಬಾಯ್ ಓರ್ವರು ಬಲಿಯಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಕೆ.ಆರ್.ಪುರಂನ ಭಟ್ಟರಹಳ್ಳಿಯ ಸಿಗ್ನಲ್ ಬಳಿ ಈ ಅಪಘಾತ ಸಂಭವಿಸಿದ್ದು, ನೇಪಾಳ ಮೂಲದ ಸುರೇಂದ್ರ ಬಹದ್ದೂರ್ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸುರೇಂದರ್ ಡಿಲೆವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಡೆಲಿವರಿ ಕೊಡಲು ತೆರಳುತ್ತಿದ್ದ ವೇಳೆ ಕಾರೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದೆ. ಘಟನಾ ಸ್ಥಳದಲ್ಲೇ ಸುರೇಂದರ್ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ.ಆರ್.ಪುರಂ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular