ಬೆಂಗಳೂರು: ಭೀಕರ ಅಪಘಾತದಲ್ಲಿ ಬ್ಲಡ್ ಬ್ಯಾಂಕ್ ಬಸ್ ಹಾಗೂ ಕರಿನ ನಡುವೆ ಸಿಲುಕಿದ ವ್ಯಕ್ತಿ ಪತ್ನಿಯ ಕಣ್ಣೆದುರೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
45 ವರ್ಷದ ಶ್ಯಾಮ್ ದೊರೆ ಮೃತ ದುರ್ದೈವಿ. ಬೆಂಗಳೂರಿನ ಮೈಸೂರು ರಸ್ತೆಯ ಸ್ಯಾಟ್‌ಲೈಟ್ ಬಸ್ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.
ಶ್ಯಾಮ್ ದೊರೆ ಹಾಗೂ ಪತ್ನಿ ಜಯಶ್ರೀ ತಮಿಳುನಾಡಿಗೆ ತೆರಳಿ ಹಿಂದಿರುಗಿದ್ದರು. ಕಾರನ್ನು ರಿವರ್ಸ್ ತೆಗೆದುಕೊಳ್ಳುತ್ತಿದ್ದ ಅಪರಿಚಿತ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ. ಅಲ್ಲೇ ನಿಂತಿದ್ದ ಬ್ಲಡ್ ಬ್ಯಾಂಕ್ ಬಸ್ ಹಾಗೂ ಕಾರಿನ ನಡುವೆ ಸಿಲುಕಿದ ಶ್ಯಾಮ್ ದೊರೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಬ್ಯಾಟರಾಯಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

