HomeLatest NewsBIG NEWS: ಬೆಂಗಳೂರು ಏರ್ ಪೋರ್ಟ್ ನಲ್ಲಿ 3 ಕೋಟಿ ಮೌಲ್ಯದ ಗಾಂಜಾ ಪತ್ತೆ: ಮೂವರು...

BIG NEWS: ಬೆಂಗಳೂರು ಏರ್ ಪೋರ್ಟ್ ನಲ್ಲಿ 3 ಕೋಟಿ ಮೌಲ್ಯದ ಗಾಂಜಾ ಪತ್ತೆ: ಮೂವರು ಅರೆಸ್ಟ್

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 3 ಕೋಟಿ ರೂಪಾಯಿ ಮೌಲ್ಯದ ಗಾಂಜಾ ಪತ್ತೆಯಾಗಿದೆ.

ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 2.97 ಕೋಟಿ ರೂ. ಮೌಲ್ಯದ 8.5 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಥಾಯ್ಲೆಂಡ್ ಮತ್ತು ಮಲೇಶಿಯಾದಿಂದ ಬಂದ ಮೂವರು ಪ್ರಯಾಣಿಕರನ್ನು ಎನ್ ಡಿ ಪಿಎಸ್ ಕಾಯ್ದೆಯಡಿ ಬಂಧಿಸಲಾಗಿದ್ದು, ಮಾದಕವಸ್ತು ಕಳ್ಳಸಾಗಣೆ ಜಾಲದ ಕುರಿತು ತನಿಖೆ ಮುಂದುವರಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಥಾಯ್ಲೆಂಡ್‌ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಇಮಿಗ್ರೇಷನ್ ವಿಭಾಗದಲ್ಲಿ ಪರಿಶೀಲಿಸಿದಾಗ ಪ್ಯಾಕೆಟ್‌ಗಳು ಪತ್ತೆಯಾಗಿದ್ದವು. ಅದರಲ್ಲಿ ಗಾಅಂಜಾ ಅಡಗಿಸಿಡಲಾಗಿತ್ತು. 8.5 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಮೌಲ್ಯವನ್ನು ಸುಮಾರು 2.97 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular