HomeUncategorizedBREAKING: ಇಸ್ರೇಲ್-ಇರಾನ್ ನಡುವೆ ಮುಂದುವರೆದ ಯುದ್ಧ: ಬೆಂಗಳೂರು ಏರ್ ಪೋರ್ಟ್ ನಲ್ಲಿ 17 ವಿಮಾನಗಳ ಹಾರಾಟ...

BREAKING: ಇಸ್ರೇಲ್-ಇರಾನ್ ನಡುವೆ ಮುಂದುವರೆದ ಯುದ್ಧ: ಬೆಂಗಳೂರು ಏರ್ ಪೋರ್ಟ್ ನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್, ಇಸ್ರೇಲ್-ಅಮೆರಿಕಾ ನಡುವಿನ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ವಿಮಾನ ಹಾರಾಟಗಳಲ್ಲಿ ಭಾರಿ ವ್ಯತ್ಯಯವುಂಟಾಗಿದೆ. ಯುದ್ಧದ ತೀವ್ರತೆ ಅಂತರಾಷ್ಟ್ರೀಯ ವಿಮಾನ ಹಾರಾಟಗಳ ಮೇಲೆ ಪರಿಣಾಮ ಬೀರುತ್ತಿವೆ.

ಇದರಿಂದಾಗಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಿರ್ಗಮಿಸಬೇಕಿದ್ದ ಹಾಗೂ ಬೆಂಗಳುರು ಏರ್ ಪೋರ್ಟ್ ಗೆ ಆಗಮಿಸಬೇಕಿದ್ದ 17 ವಿಮಾನಗಳು ಇಂದು ಕೂಡ ರದ್ದಾಗಿವೆ.

ಅರಬ್ ರಷ್ಟ್ರಗಳಿಗೆ ತೆರಳುವ ಹಾಗೂ ಅಲ್ಲಿಂದ ಬೆಂಗಳೂರಿಗೆ ಆಗಮಿಸಬೇಕಿದ್ದ ವಿಮಾನಗಳು ಸ್ಥಗಿತಗೊಂಡಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ 8 ವಿಮಾನಗಳು ಹಾಗೂ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ 9 ವಿಮಾನಗಳು ರದ್ದಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಬುಧಾಬಿ, ರಿಯಾದ್, ಜೆಡ್ಡಾ, ದುಬೈ, ದೋಹಾ ಸೇರಿದಂತೆ ಹಲವೆಡೆ ತೆರಳುವ ವಿಮಾನಗಳು ರದ್ದಾಗಿವೆ. ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಮುಂಚಿತವಾಗಿಯೇ ಈಬಗ್ಗೆ ಮಾಹಿತಿಗಳನ್ನು ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular