ALERT : ಬೆಂಗಳೂರಿಗರೇ ಎಚ್ಚರ : ಇನ್ಮುಂದೆ ಎಲ್ಲೆಂದರಲ್ಲಿ ಕಸ ಎಸೆದರೆ ಬೀಳುತ್ತೆ 2000 ರೂ.ದಂಡ.!


ಬೆಂಗಳೂರು : ಬೆಂಗಳೂರಿಗರೇ ಎಚ್ಚರ : ಇನ್ಮುಂದೆ ಎಲ್ಲೆಂದರಲ್ಲಿ ಕಸ ಎಸೆದರೆ ಬೀಳುತ್ತೆ 2000 ರೂ.ದಂಡ.! ಹೌದು. ಇದುವರೆಗೆ, ಕಸ ಎಸೆದು ಮೊದಲ ಬಾರಿ ಸಿಕ್ಕಿಬಿದ್ದರೆ 500, 1000, 2000 ರೂ ದಂಡ ವಿಧಿಸಲಾಗುತ್ತಿತ್ತು. ಇನ್ಮುಂದೆ 2000 ರೂ ದಂಡ ವಿಧಿಸಲಾಗುತ್ತದೆ.

ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಮೊದಲ ಬಾರಿಗೆ 500 ರೂ. ದಂಡ ವಿಧಿಸಲಾಗುವುದು ಮತ್ತೆ ಅವರು ಇಂತಹದ್ದೇ ಧೋರಣೆ ಮುಂದುವರೆಸಿದರೆ 2000 ರೂ.ಗಳ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಮುಖ್ಯ ಕಾರ್ಯನಿರ್ವಾಹಕ ಕರೀಗೌಡ ಎಚ್ಚರಿಸಿದ್ದಾರೆ.

ಮನೆ ಮುಂದೆ ಕಸದ ವಾಹನ ಬಂದರೂ ಕಸ ಹಾಕದೆ ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಬಿಸಿ ಮುಟ್ಟಿಸಬೇಕು ಎಂಬ ಉದ್ದೇಶದಿಂದ ಇಂತಹ ಕಠಿಣ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ಲಾಸ್ಟಿಕ್ಬಳಕೆ ತಡೆಗೆ 27 ತಂಡಗಳ ರಚನೆ ಮಾಡಲಾಗುವುದು ಈ ತಂಡಗಳು ವಾರಕ್ಕೆ ಐದು ವಾರ್ಡ್ ಗಳಲ್ಲಿ ತಪಾಸಣೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read