ಬೆಂಗಳೂರಿಗರೇ ಗಮನಿಸಿ : ನಾಳೆ ಈ ಮಾರ್ಗದಲ್ಲಿ `ಮೆಟ್ರೋ’ ಸಂಚಾರ ಸ್ಥಗಿತ

ಬೆಂಗಳೂರು: ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಭಾನುವಾರ ಬೆಳಿಗ್ಗೆ 7 ರಿಂದ 9 ರವರೆಗೆ ಮೆಟ್ರೋ ರೈಲುಗಳ ಸಂಚಾರ ಸ್ಥಗಿತವಾಗಲಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಪ್ರಕಾರ, ಎಸ್ವಿ ರಸ್ತೆ ಮತ್ತು ಇಂದಿರಾನಗರ ನಿಲ್ದಾಣಗಳ ನಡುವಿನ ನಿರ್ವಹಣಾ ಕಾರ್ಯಗಳಿಂದಾಗಿ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ಇಂದಿರಾನಗರದವರೆಗೆ ನಾಳೆ ಬೆಳಗ್ಗೆ  9 ಗಂಟೆವರೆಗೆ ನಮ್ಮ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಎಂಜಿ ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಮೆಟ್ರೋ ಸೇವೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ನೇರಳೆ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿದ್ದು, ಸದರಿ ಕಾರ್ಯವನ್ನು ನಿರ್ವಹಿಸಲು ಎಂ.ಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7.00ಗಂಟೆಗೆ ಬದಲಾಗಿ 9.00 ಗಂಟೆಗೆ ಪ್ರಾರಂಭವಾಗಲಿದೆ.

ಬೆಳಗ್ಗೆ 9.00 ಗಂಟೆಯ ನಂತರ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಲಭ್ಯವಿರುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read