ಬೆಂಗಳೂರು: ಬೆಂಗಳೂರಿನ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ವೊಂದರಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಅಶೋಕ ನಗರದ ಗರುಡಾಅ ಮಾಲ್ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಫ್ಲ್ಯಾಟ್ ಧಗಧಗನೆ ಹೊತ್ತಿ ಉರಿದಿದೆ. ಕಟ್ಟಡದ ಒಳಗೆ ದಟ್ಟ ಹೊಗೆ ಆವರಿಸಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಆದರೆ ಫ್ಲ್ಯಾಟ್ ಸಂಪೂರ್ಣ ಸುಟ್ತು ಕರಕಲಾಗಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆಂಕಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇತಿ ನೀಡಿ ಪರಿಶೀಲನೆ ನಡೆಸಿದ್ದಾರೆ.

