ಬೆಂಗಳೂರು: ಬೆಂಗಳೂರಿನಲ್ಲಿ ಮಾಸ್ ಧರಿಸಿ ಎಟಿಎಂ ದರೋಡೆಗೆ ಯತ್ನಿಸಿದ್ದ ಖತರ್ನಾಕ್ ಕಳ್ಳನನ್ನು ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಜೇಂದ್ರ ಸಿಂಗ್ ಬಂಧಿತ ಆರೋಪಿ. ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬ್ಯಾಂಕ್ ಆಫ್ ಬರೋಡಾ ಎಟಿಎಂಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಎಟಿಎಂಗೆ ನುಗ್ಗಿದ್ದ ದರೋಡೆಕೋರ ಶೆಟರ್ ಮುಚ್ಚಿ, ಸಿಸಿ ಕ್ಯಾಮರಾ ಮುಚ್ಚಿ ಕಳ್ಳತನಕ್ಕೆ ಯತ್ನಿಸಿದ್ದ.
ಸದ್ಯ ಆರೋಪಿ ರಾಜೇಂದ್ರ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ಈತನ ಹಿಂದೆ ಇನ್ನಷ್ಟು ಖದೀಮರ ಗ್ಯಾಂಗ್ ಇರುವ ಶಂಕೆ ಇದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಸಿದ್ದಾರೆ.

