HomeKarnatakaBIG NEWS: ಬೆಂಗಳೂರಿನಲ್ಲಿ ಅಪಾರ್ಟ್ ಮೆಂಟ್ ಗೆ ನುಗ್ಗಿದ ಚಿರತೆ

BIG NEWS: ಬೆಂಗಳೂರಿನಲ್ಲಿ ಅಪಾರ್ಟ್ ಮೆಂಟ್ ಗೆ ನುಗ್ಗಿದ ಚಿರತೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಚಿರತೆ ಹಾವಳಿ ಹೆಚ್ಚಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಬೆಂಗಳೂರಿನ ಆನೆಕಲ್ ಬಳಿ ಅಪಾರ್ಟ್ ಮೆಂಟ್ ಗಳಿಗೆ ಚಿರತೆ ನುಗ್ಗಿದ್ದು, ರಾಜಾರೋಷವಾಗಿ ಲಿಫ್ಟ್ ಬಾಗಿಲ ಬಳಿ ಸಂಚಾರ ನಡೆಸಿದೆ.

ಆನೇಕಲ್ ನ ಕೂಡ್ಲು ಗೇಟ್ ಬಳಿಯ ಕ್ಯಾಡೆನ್ಜಾ ಅಪಾರ್ಟ್ ಮೆಂಟ್ ಗೆ ನುಗ್ಗಿರುವ ಚಿರತೆ ಅಪಾರ್ಟ್ ಮೆಂಟ್ ನ ಪಾರ್ಕಿಂಗ್ ಪ್ರದೇಶ, ಲಿಫ್ಟ್ ಬಾಗಿಲುಗಳ ಬಳಿ ಓಡಾಟ ನಡೆಸಿದೆ. ನಿನ್ನೆ ಸಂಜೆ ಅಥವಾ ರಾತ್ರಿ ವೇಳೆ ಚಿರತೆ ಅಪಾರ್ಟ್ ಮೆಂಟ್ ನಲ್ಲಿ ಸಂಚರಿಸಿದ್ದು, ಸಿಸಿಟಿವಿಯಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಾರ್ಟ್ ಮೆಂಟ್ ನಿವಾಸಿಗಳು, ಸ್ಥಳೀಯ ನಿವಾಸಿಗಳು ಮನೆಯಿಂದ ಹೊರ ಬರಲು ಭಯ ಪಡುತ್ತಿದ್ದು, ಜೀವ ಭವದಲ್ಲಿ ವಾಸಿಸುತ್ತಿರುವುದಾಗಿ ಆತಂಕ ವ್ಯಕ್ತಪಡಿಸಿದ್ದಾರೆ.

ಬೊಮ್ಮನಹಳ್ಳಿ, ಹೆಚ್.ಎಸ್.ಆರ್ ಲೇಔಟ್, ಬಿಟಿಎಂ ಲೇಔಟ್ ಪ್ರದೇಶಗಳ ಸುತ್ತ ಮುತ್ತ ಚಿರತೆ ಓಡಾಡುತ್ತಿದ್ದು, ಚಿರತೆ ಸೆರೆ ಹಿಡಿಯುವಂತೆ ಸಾರ್ವಜನಿಕರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular