ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ.
ಅಪಾರ್ಟ್ ಮೆಂಟ್ ವೊಂದರ ಪಕ್ಕದ ಕಾಂಪೌಂಡ್ ಬಳಿ ಇಬ್ಬರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಕಾಂಪೌಂಡ್ ಬಿದ್ದು ರಾಜಸ್ಥಾನ ಮೂಲದ ಓರ್ವ ಮೃತಪಟ್ಟಿದ್ದಾರೆ.
ಇನ್ನೋರ್ವ ಬಚಾವ್ ಆಗಿದ್ದಾರೆ.
ಘಟನಾ ಸ್ಥಳಕ್ಕೆ ಕುಂಬಳಗೋಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಂಪೌಂಡ್ ಕುಸಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

