HomeKarnatakaBIG NEWS: ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ; 2970 ಹೊಸ ಕೇಸ್ ಪತ್ತೆ

BIG NEWS: ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ; 2970 ಹೊಸ ಕೇಸ್ ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಮತ್ತೆ ಹೆಚ್ಚುತ್ತಿದೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಡೆಂಗ್ಯೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.

ಜ್ವರ ಬಿಟ್ಟು ಮತ್ತೆ ಮೂರು ದಿನಕ್ಕೆ ಮತ್ತೆ ಜ್ವರ ಕಾಣಿಸಿಕೊಳ್ಳುತ್ತಿದ್ದು, ಈ ರೀತಿ ಜ್ವರ ಕಂಡುಬಂದ ಬಹುತೇಕರಲ್ಲಿ ಡೆಂಗ್ಯೂ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ 30 ದಿನಗಳಲ್ಲಿ ರಾಜಧಾನಿಯಲ್ಲಿ ಬರೋಬ್ಬರಿ 2970 ಹೊಸ ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಇದು ಕಳೆದ ಮೂರುವರ್ಷಗಳಲ್ಲಿಯೇ ಪತ್ತೆಯಾದ ಗರಿಷ್ಠ ಪ್ರಕರಣವಾಗಿದೆ. ಕಳೆದ ತಿಂಗಳು ಕೊಂಚ ಕಡಿಮೆಯಾಗಿದ್ದ ಡೆಂಗ್ಯೂ ಕೇಸ್ ಈ ಬಾರಿ ಮತ್ತೆ ಏರಿಕೆಯಾಗಿದೆ.

ಈ ವರ್ಷ ಜನವರಿಂದ ಈವರೆಗೆ 7228 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಇದು ಆರೋಗ್ಯ ಇಲಾಖೆಯಲ್ಲಿಯೇ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಜ್ವರ, ಶೀತ, ಕೆಮ್ಮು ಲಕ್ಷಣಗಳು ಕಂಡುಬಂದರೆ ನಿರ್ಲಕ್ಷ್ಯ ಮಾಡದೇ ಪರೀಕ್ಷೆ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular