HomeLatest Newsವಾಹನ ಸವಾರರೇ ಎಚ್ಚರ: ಬೆಂಗಳೂರಿನಲ್ಲಿ ಒಂದೇ ವರ್ಷದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ಶೇ82ರಷ್ಟು ಹೆಚ್ಚಳ

ವಾಹನ ಸವಾರರೇ ಎಚ್ಚರ: ಬೆಂಗಳೂರಿನಲ್ಲಿ ಒಂದೇ ವರ್ಷದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ಶೇ82ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ದಿನದಿಂದ ದಿನಕ್ಕೆ, ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ವರದಿ ಪ್ರಕಾರ ಒಂದೇ ವರ್ಷದಲ್ಲಿ ಶೇ.82 ಪ್ರಕರಣಗಳು ಹೆಚ್ಚಳವಾಗಿವೆ.

2025ರಲ್ಲಿ ಶೇ. 82ರಷ್ಟು ಸಂಚಾರಿ ನಿಯಮ ಉಲ್ಲಂಘನೆ ಪ್ರಾರಣ ಹೆಚ್ಚಾಗಿವೆ. ಅತಿಯಾದ ವೇಗ, ನಿರ್ಲಕ್ಷ್ಯ, ಫುಟ್‌ಪಾತ್ ಪಾರ್ಕಿಂಗ್‌ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆ ಅಡಿ ಪೊಲೀಸರು ದಾಖಲಿಸಿರುವ ಪ್ರಕರಣಗಳು 6,872ಕ್ಕೆ ಏರಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಚಾರಿ ನಿಯಮ ಉಲ್ಲಂಘನೆಯಡಿಯಲ್ಲಿ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮತ್ತು ತಪ್ಪು ದಿಕ್ಕಿನಲ್ಲಿ ಚಾಲನೆ , ವಿವಿಧ ವಿಭಾಗಗಳಲ್ಲಿ ವಾಹನ ಚಲಾಯಿಸಿದ್ದಕ್ಕಾಗಿ ಸಂಚಾರ ಪೊಲೀಸರು ದಾಖಲಿಸಿರುವ ಪ್ರಕರಣಗಳ ಸಂಖ್ಯೆ 2024ಕ್ಕೆ ಹೋಲಿಸಿದರೆ 2025ರಲ್ಲಿ ಶೇಕಡಾ 82 ರಷ್ಟು ಹೆಚ್ಚಾಗಿದೆ. 2025ರಲ್ಲಿ ಸುಮಾರು 6,872 ಪ್ರಕರಣಗಳು ದಾಖಲಾಗಿವೆ. ಇದು 2024ರಲ್ಲಿ ಹೊಲಿಸಿದರೆ ಒಂದೇ ವರ್ಷದಲ್ಲಿ 3,774 ಪ್ರಕರಣಗಳು ಹೆಚ್ಚಾಗಿವೆ.

ಇದು ವಾಹನ ಸವಾರರಿಗೆ ಎಚ್ಚರಿಕೆ ಗಂಟೆಯೂ ಆಗಿದೆ. ಸಂಚಾರ ನಿಮಯಗಳನ್ನು ಉಲ್ಲಂಘನೆ ಮಾಡುವ ವಾಹನ ಸವಾರರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ. ಬಿಎನ್ಎಸ್​​ ಕಾಯ್ದೆ 285ರ ಅಡಿಯಲ್ಲಿ, ಸಂಚಾರಕ್ಕೆ ಅಡ್ಡಿಯುಂಟು ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಳ್ಳುವ ಅವಕಾಶ ಇದೆ. ವಾಹನ ಸವಾರರು ತಪ್ಪು ದಿಕ್ಕಿನಲ್ಲಿ ವಾಹನ ಚಲಾಯಿಸುವುದು ಕೂಡ ಸಂಚಾರ ನಿಯಮ ಉಲ್ಲಂಘನೆಯಾಗುತ್ತದೆ. ಸಂಚಾರ ದಟ್ಟಣೆ ಉಂಟಾದಾಗ ಮಾತ್ರ ಪ್ರಕರಣಗಳು ದಾಖಲಾಗಲಿವೆ. ಇಲ್ಲವೆಂದರೆ ಚಲನ್ ನೀಡಲಾಗುತ್ತದೆ ಮತ್ತು ದಂಡವನ್ನು ಸಂಗ್ರಹಿಸಲಾಗುತ್ತದೆ ಎಂದು ಎಂದು ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ವರದಿ ಪ್ರಕಾರ, 2025ರಲ್ಲಿ ಬೆಂಗಳೂರು ನಗರದಲ್ಲಿ 896 ಗಂಭೀರ ಅಪಘಾತಗಳು ಸಂಭವಿಸಿವೆ. 2024 ಕ್ಕೆ ಹೋಲಿಸಿದರೆ ಶೇಕಡಾ 3 ರಷ್ಟು ಕಡಿಮೆಯಾಗಿದೆ ಮತ್ತು 4,228 ಗಂಭೀರವಲ್ಲದ ಅಪಘಾತಗಳು, 2024 ಕ್ಕೆ ಹೋಲಿಸಿದರೆ ಶೇಕಡಾ 4 ರಷ್ಟು ಹೆಚ್ಚಾಗಿದೆ. ಇನ್ನು ಗಂಭೀರ ಅಪಘಾತಗಳ ಸಂಖ್ಯೆ ಕಡಿಮೆಯಾಗಲು ಬೆಂಗಳೂರು ಟ್ರಾಪಿಕ್​​​​ ಪೊಲೀಸ್ ನ್ಯಾಯವ್ಯಾಪ್ತಿಯ ಹೆಚ್ಚಳವೇ ಕಾರಣ. ಬಿಟಿಪಿಯ ಅಧಿಕಾರ ವ್ಯಾಪ್ತಿ ಸುಮಾರು ಶೇ.15 ರಷ್ಟು ಹೆಚ್ಚಾಳವಾಗಿರುವುದರಿಂದ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular