HomeKarnatakaBREAKING: ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಡಾ.ರಾಜ್‌ಕುಮಾರ್ ಪುಣ್ಯಭೂಮಿ ಬಳಿ ಕಾಮಗಾರಿ ವೇಳೆ ಮಣ್ಣು ಕುಸಿತ: ಓರ್ವ...

BREAKING: ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಡಾ.ರಾಜ್‌ಕುಮಾರ್ ಪುಣ್ಯಭೂಮಿ ಬಳಿ ಕಾಮಗಾರಿ ವೇಳೆ ಮಣ್ಣು ಕುಸಿತ: ಓರ್ವ ಕಾರ್ಮಿಕ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿತ ಸಂಭವಿಸಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಂಭಾಗ ಹಾಗೂ ಡಾ.ರಾಜ್‌ಕುಮಾರ್ ಪುಣ್ಯಭೂಮಿ ಬಳಿ ಬಿಡಿಎಯಿಂದ ನಡೆಯುತ್ತಿದ್ದ ಕಾಮಗಾರಿ ವೇಳೆ ಈ ದುರಂತವೊಂದು ಸಂಭವಿಸಿದೆ.

ಅಂಡರ್‌ಪಾಸ್ ನಿರ್ಮಾಣಕ್ಕಾಗಿ ತೋಡಲಾಗಿದ್ದ ಬೃಹತ್ ಗುಂಡಿಯ ಮಣ್ಣಿನ ತಡೆಗೋಡೆ ಕುಸಿದು ಬಿದ್ದಿದೆ. ಪರಿಣಾಮ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅವಶೇಷಗಳ ಅಡಿಯಲ್ಲಿ ಇನ್ನೂ ಓರ್ವ ಕಾರ್ಮಿಕ ಸಿಲುಕಿಕೊಂಡಿರುವ ಶಂಕೆಯಿದೆ. ರಕ್ಷಣಾ ಕಾರ್ಯಾಚರಣೆ ಬರದಿಂದಸಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಕಾರ್ಮಿಕ ಹೊರ ರಾಜ್ಯದವನೆಂದು ತಿಳಿದುಬಂದಿದೆ. ಅಂಡರ್‌ಪಾಸ್ ಕಾಮಗಾರಿಗಾಗಿ ರಸ್ತೆಯಲ್ಲಿ ಸುಮಾರು 20 ಅಡಿ ಆಳದವರೆಗೆ ಮಣ್ಣನ್ನು ಅಗೆಯಲಾಗಿತ್ತು. ಇಂದು ಎಂದಿನಂತೆ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿದ್ದಾಗ ಮೇಲಿಂದ ಏಕಾಏಕಿ ಮಣ್ಣಿನ ತಡೆಗೋಡೆ ಕುಸಿದುಬಿದ್ದಿದೆ. ಈ ವೇಳೆ ಸ್ಥಳದಲ್ಲಿದ್ದ ಐವರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿ ಉಸಿರಾಡಲಾಗದೆ ನರಳಾಡಿದ್ದಾರೆ.

ಸದ್ಯ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಮಯಪ್ರಜ್ಞೆಯಿಂದ ಮಣ್ಣಿನಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಓರ್ವ ಕಾರ್ಮಿಕ ಮಣ್ಣಿನ ಅಡಿಯಲ್ಲಿ ಸಿಲುಕಿದ್ದು ಅವರನ್ನು ರಕ್ಷಿಸುವ ಕಾರ್ಯ ಮುಂದುವರಿದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular