ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿದ್ದಾರೆ. ಬೆಂಗಳೂರಿನಲ್ಲಿ ಬರೋಬ್ಬರಿ 2 ಕೋಟಿ ಮೌಲ್ಯದ 2 ಕೆಜಿ ಎಂಡಿಎಂಎ ಡ್ರಗ್ಸ್ ನ್ನು ಯಲಹಂಕ ಪೊಲೀಸರು ಜಪ್ತಿ ಮಾಡಿದ್ದಾರೆ.
ನೈಜೀರಿಯಾ ಪ್ರಜೆ ಸ್ಯಾಮ್ಯುಯೆಲ್ ಇಕ್ಕೆನಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯುಸಿನೆಸ್ ವೀಸಾದಲ್ಲಿ 2021ರಲ್ಲಿ ಭಾಅರತಕ್ಕೆ ಬಂದಿದ್ದ ಈತ ದೆಹಲಿ, ಮುಂಬೈಗಳಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ. ಕಳೆದ ವರ್ಷ ಬೆಂಗಳೂರಿಗೆ ಭೇಟಿ ಕೊಟ್ಟಿದ್ದ ಈತ ಬಟ್ಟೆ ಮಾರುವ ನೆಪದಲ್ಲಿ ಡ್ರಗ್ಸ್ ಡೀಲ್ ಮಾಡುತ್ತಿದ್ದ.
ಬನ್ನೇರುಘಟ್ಟದ ಬಳಿ 50 ಸಾವಿರ ರೂಪಾಯಿ ಕೊಟ್ಟು ಡ್ರಗ್ಸ್ ಖರೀದಿಸಿದ್ದಾಗಿ ಆರೋಪಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

