HomeKarnatakaಬೆಂಗಳೂರುನಲ್ಲಿ 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಕೊಕೇನ್ ಜಪ್ತಿ: ಉಗಾಂಡಾ ಮಹಿಳೆ ಸೇರಿ...

ಬೆಂಗಳೂರುನಲ್ಲಿ 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಕೊಕೇನ್ ಜಪ್ತಿ: ಉಗಾಂಡಾ ಮಹಿಳೆ ಸೇರಿ ಮೂವರು ಅರೆಸ್ಟ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ವಿರುದ್ಧ ಸಮರ ಸಾರಿರುವ ಪೊಲೀಸರು ಹಾಗೂ ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಕೊಕೇನ್ ಜಪ್ತಿ ಮಾಡಿದ್ದಾರೆ. ಅಂತರರಾಷ್ಟ್ರೀಯ ಮತ್ತು ಅಂತರರಾಜ್ಯ ಡ್ರಗ್ಸ್ ಡೀಲಿಂಗ್‌ನಲ್ಲಿ ತೊಡಗಿದ್ದ ಉಗಾಂಡಾ ಮೂಲದ ಮಹಿಳೆ ಸೇರಿ ಮೂವರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಹೆಬ್ಬಾಳ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಹೈಡ್ರೋ ಗಾಂಜಾ ಡೀಲಿಂಗ್‌ನಲ್ಲಿ ನಿರತನಾಗಿದ್ದ ಹಳೆ ಆರೋಪಿ ಇಮ್ರಾನ್ ಪಾಷಾ ಎಂಬಾತನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತನಿಂದ 2.20 ಕೋಟಿ ರೂಪಾಯಿ ಮೌಲ್ಯದ 3 ಕೆಜಿ 180 ಗ್ರಾಂ ತೂಕದ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಇಮ್ರಾನ್ ಈ ಮಾದಕ ವಸ್ತುವನ್ನು ಮಹಾರಾಷ್ಟ್ರದ ನಾಸಿಕ್‌ನಿಂದ ಬೆಂಗಳೂರಿಗೆ ತರುತ್ತಿದ್ದ ಎನ್ನಲಾಗಿದ್ದು, ಈತನ ಮೇಲೆ ಈಗಾಗಲೇ ನಗರದ ಬೇರೆ ಬೇರೆ ಪೊಲೀಸ್ ಸ್ಟೇಷನ್‌ಗಳಲ್ಲಿ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಥಾಯ್ಲೆಂಡ್‌ನ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕನೊಬ್ಬನ ಲಗೇಜ್ ಬ್ಯಾಗ್‌ಗಳನ್ನು ತಪಾಸಣೆ ನಡೆಸಿದಾಗ 2.77 ಕೋಟಿ ರೂಪಾಯಿ ಮೌಲ್ಯದ 7.92 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಅಧಿಕಾರಿಗಳು ಗಾಂಜಾವನ್ನು ಜಪ್ತಿ ಮಾಡಿ, ಪ್ರಯಾಣಿಕನನ್ನು ವಶಕ್ಕೆ ಪಡೆದು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಮತ್ತೊಂದು ಪ್ರಮುಖ ಕಾರ್ಯಾಚರಣೆಯಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಚಿಕ್ಕಬಾಣಾವರದಲ್ಲಿ ದಾಳಿ ನಡೆಸಿ 70.50 ಲಕ್ಷ ರೂಪಾಯಿ ಮೌಲ್ಯದ 130 ಗ್ರಾಂ ಕೊಕೇನ್ ಜಪ್ತಿ ಮಾಡಿದ್ದಾರೆ. ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಜನತ್ ಮತ್ತು ಡ್ರಗ್ಸ್ ರಿಸೀವರ್ ವಾಹಬ್ ಎಲ್ವಿಸ್ ಯುನಿಸ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ.

ಆರೋಪಿ ವಾಹಬ್ ಯಶವಂತಪುರ ಮತ್ತು ಗೊರಗುಂಟೆಪಾಳ್ಯ ಸುತ್ತಮುತ್ತ ಡ್ರಗ್ಸ್ ಡೀಲಿಂಗ್ ಮಾಡುತ್ತಿದ್ದ. ಬಂಧಿತ ಮಹಿಳೆ ಜನತ್ ಬಿಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು ಡ್ರಗ್ ಪೆಡ್ಲಿಂಗ್ ಆರಂಭಿಸಿದ್ದಳು. ಈಕೆ ಈ ಹಿಂದೆ ದೆಹಲಿಯಲ್ಲೂ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು 5 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಳು ಎಂದು ತಿಳೀದು ಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular