HomeLatest News5.24 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ: 16 ಆರೋಪಿಗಳು ಅರೆಸ್ಟ್

5.24 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ: 16 ಆರೋಪಿಗಳು ಅರೆಸ್ಟ್

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು ವಿವಿಧ ಪ್ರಕರಣಗಳಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. 16 ಆರೋಪಿಗಳನ್ನು ಬಂಧಿಸಿದ್ದಾರೆ.

ಡ್ರಗ್ಸ್ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರು ಸೇರಿ ಒಟ್ಟು 16 ಪೆಡ್ಲರ್​ಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿದೇಶಿ ಪ್ರಜೆಗಳು ಸೇರಿದಂತೆ ಹೊರ ರಾಜ್ಯದ 8 ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಜೊತೆಗೆ ನಗರದಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಮೂರು ಸಾವಿರ ಎಂಡಿಎಂ ಮಾತ್ರೆಗಳು ಮತ್ತು ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೈಜೀರಿಯಾ ಪ್ರಜೆಯ ಡ್ರಗ್ಸ್ ಡಿಲೀಂಗ್​​ಗೆ ಸಾಥ್ ಕೊಡುತ್ತಿದ್ದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಭಾಷಿಣಿ ಬಂಧಿತ ಮಹಿಳೆ. ಬಾಗಲೂರು ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು. ಬಂಧಿತ ಸುಭಾಷಿಣಿ, ನೈಜೀರಿಯನ್​​ ಪ್ರಜೆಯೊಬ್ಬನ ಜೊತೆ ಸೇರಿ ಡ್ರಗ್ಸ್ ಡಿಲೀಂಗ್​​​ ಮಾಡುತ್ತಿದ್ದಳು. ಸುಭಾಷಿಣಿ ಮನೆಯಲ್ಲಿ ಡ್ರಗ್ಸ್ ಶೇಖರಿಸಿಟ್ಟು, ನೈಜಿರಿಯನ್ ಪ್ರಜೆ ಸೂಚಿಸಿದ್ದ ವಿಳಾಸ, ಗ್ರಾಹಕರಿಗೆ ಸುಭಾಷಿಣಿ ತಲುಪಿಸುತ್ತಿದ್ದಳು.

ಇನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ, ಬಂಧಿತಳಿಂದ 2 ಕೋಟಿ ರೂ ಮೌಲ್ಯದ 300 ಎಕ್ಸ್ ಟೆಸಿ ಮಾತ್ರೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪರಾರಿಯಾಗಿರುವ ವಿದೇಶಿ ಡ್ರಗ್ ಪೆಡ್ಲರ್​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular