HomeLatest Newsಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: 4 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: 7 ಪೆಡ್ಲರ್ ಗಳು...

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: 4 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: 7 ಪೆಡ್ಲರ್ ಗಳು ಸೇರಿ 10 ಜನರು ಅರೆಸ್ಟ್

ಬೆಂಗಳೂರು: ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 4 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದು, 7 ಪೆಡ್ಲರ್ ಗಳು ಸೇರಿದಂತೆ 10 ಜನರನ್ನು ಬಂಧಿಸಿರುವ ಘಟನೆ ನಡೆದಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಹಿಂದೆ ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಮಾತ್ರ ಮಾದಕ ವಸ್ತುಗಳು, ಡ್ರಗ್ಸ್ ಪತ್ತೆಯಾಗುತ್ತಿತ್ತು. ಆದರೀಗ ಸಾಮಾನ್ಯ ದಿನಗಳಲ್ಲಿಯೂ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಅಮೃತಹಳ್ಳಿ ಪೊಲೀಸರು ಕೇರಳ ಮೂಲದ 7 ಪೆಡ್ಲರ್ ಗಳು ಸೇರಿ 10 ಜನರನ್ನು ಬಂಧಿಸಿದ್ದಾರೆ. ಈ ಮೂಲಕ ಬೃಹತ್ ಡ್ರಗ್ಸ್ ಜಾಲ ಬೇಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತ ಆರೋಪಿಗಳಿಂದ 4 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಥೈಲ್ಯಾಂಡ್ ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು, ಡಾರ್ಕ್ ವೆಬ್ ಮೂಲಕ ಬೆಂಗಳೂರಿನಾದ್ಯಂತ ಮಾರಾಟ ಮಾಡುತ್ತಿದ್ದರು.

ಬಂಧಿತ ಆರೋಪಿಗಳನ್ನು ಕುಶಾಲ್, ಸಾಗರ್, ಶಶಾಂಕ್, ವಿಲ್ಸನ್, ಆಶಿರ್ ಅಲಿ, ಸಜ್ಜದ್, ರಿಯಾಜ್, ಶಿಯಾಬ್, ನಿಸಾರ್, ಮತ್ತು ಅಭಿನವ್ ಎಂದು ಗುರುತಿಸಲಗಿದೆ. ಬಂಧಿತ ಡ್ರಗ್ ಪೆಡ್ಲರ್ ಗಳ ಪೈಕಿ ಇಬ್ಬರು ಕರ್ನಾಟಕ ಓರ್ವ ಆಂಧ್ರಪ್ರದೇಶ ಮೂಲದವನು. ಉಳಿದ ಏಳು ಜನರು ಕೇರಳ ಮೂಲದವರು.

ಥೈಲ್ಯಾಂಡ್ ನಿಂದ ಡ್ರಗ್ಸ್ ತರಿಸಿಕೊಂಡು ಡಾರ್ಕ್ ವೆಬ್ ನಲ್ಲಿ ಟೀಂ ಕಲ್ಕಿ ಎಂಬ ವೆಬ್ ಸೈಟ್ ಮೂಲಕ ಆರ್ಡರ್ ಮಾಡುತ್ತಿದ್ದರು. ಥೈಲ್ಯಾಂಡ್ ನಲ್ಲಿರುವ ಕೇರಳ ಮೂಲದ ವ್ಯಕ್ತಿ ವಿಮಾನದ ಮೂಲಕ ಬೆಂಗಳೂರಿಗೆ ಡ್ರಗ್ಸ್ ಕಳುಹಿಸುತ್ತಿದ್ದ. ಹೀಗೆ ಬಂದ ಡ್ರಗ್ಸ್ ಪಡೆದ ಆರೋಪಿಗಳು ಬೆಂಗಳೂರು ನಗರದಾದ್ಯಂತ ವಿತರಿಸುತ್ತಿದ್ದರು ಎಂದು ತನಿಖೆಯಲ್ಲಿ ಬಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular