BIG NEWS: ಬೆಂಗಳೂರಿನಲ್ಲಿ ವಿದ್ಯುತ್ ತಂತಿಗೆ ತಾಯಿ-ಮಗಳು ಬಲಿ; ಮೂವರು ಬೆಸ್ಕಾಂ ಅಧಿಕಾರಿಗಳು ಪೊಲೀಸ್ ವಶಕ್ಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಇಂದು ಬೆಂಜಾನೆ 5 ಗಂಟೆ ಸುಮಾರಿಗೆ ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದ ತಾಯಿ ಹಾಗೂ ಮಗಳು ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ಇಳಿದು ಮನೆಗೆ ತೆರಳುತ್ತಿದ್ದಾಗ ರಸ್ತೆಯ ಮೇಲೆ ತುಂಡಾಗಿ ಬಿದ್ದಿದ್ದ ಕರೆಂಟ್ ವೈರ್ ಕಾಣದೆ ತುಳಿದಿದ್ದಾರೆ. ಕ್ಷಣಾರ್ಧದಲ್ಲಿ ವಿದ್ಯುತ್ ಪ್ರವಹಿಸಿ ತಾಯಿ ಹಾಗೂ ಮಗಳು ಇಬ್ಬರಿಗೂ ಬೆಂಕಿ ಹೊತ್ತಿಕೊಂಡಿದ್ದು, ಸಜೀವ ದಹನವಾಗಿದ್ದಾರೆ.

ಸೌಂದರ್ಯ ಹಾಗೂ ಲೀಲಾ ಮೃತ ತಾಯಿ-ಮಗಳು. ಬೆಸ್ಕಾಂ ನಿರ್ಲಕ್ಷ್ಯದಿಂದಲೇ ಈ ದುರಂತ ಸಂಭವಿಸಿದ್ದು, ಕಾಡುಗೋಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read