HomeKarnatakaBREAKING: ಬೆಂಗಳೂರಿನ ಪರ್ಫ್ಯೂಮ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ

BREAKING: ಬೆಂಗಳೂರಿನ ಪರ್ಫ್ಯೂಮ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಪರ್ಫ್ಯೂಮ್ ಗೋದಾಮಿನಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಮುಗಿಲೆತ್ತರದವರೆಗೆ ಬೆಂಕಿ ಹೊತ್ತಿ ಉರಿದಿದೆ.

ಬೆಂಗಳೂರು ಉತ್ತರ ತಾಲೂಕಿನ ಮಾಕಳಿ ಬಳಿಯ ಪರ್ಫ್ಯೂಮ್ ಗೋದಾಮಿನಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಿಗ್ಗೆ 11:30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಕೆಲವೇ ಹೊತ್ತಲ್ಲಿ ಇಡೀ ಗೋದಾಮು ಧಗ ಧಗನೆ ಹೊತ್ತಿ ಉರಿದಿದೆ.

ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ಸುತ್ತಮುತ್ತಲ ಕಟ್ಟಡಕ್ಕೂ ಹಾನಿಯುಂಟು ಮಾಡಿದೆ. ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಾರ ಪ್ರಮಾಣದ ಸುಗಂಧ ದ್ರವ್ಯ, ವಸ್ತುಗಳು ಬೆಂಕಿಗಾಹುತಿಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular