ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಪ್ಲೇವುಡ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ.
ಬೆಂಗಳೂರಿನ ಮೈಸೂರು ರಸ್ತೆಯ ಸಿರ್ಸಿ ಸರ್ಕಲ್ ಬಳಿ ಇರುವ ಪ್ಲೇವುಡ್ ಫ್ಯಾಕ್ಟರಿಯ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ. ಅಕ್ಕಪಕ್ಕದಲ್ಲಿರುವ ಎರಡು ಮೂರು ಕಾರ್ಖಾನೆಗಳಿಗೂ ಬೆಂಕಿ ವ್ಯಾಪಿಸಿದೆ.
ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಅಪಾರ ಪ್ರಮಣದ ವಸ್ತುಗಳು ಬೆಂಕಿಗಾಹುತಿಯಾಗಿವೆ.

