HomeKarnatakaBREAKING: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಗ್ಯಾರೇಜ್ ನಲ್ಲಿ ಬೆಂಕಿ: 20ಕ್ಕೂ ಹೆಚ್ಚು ವಾಹನಗಳು ಸುಟ್ಟು...

BREAKING: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಗ್ಯಾರೇಜ್ ನಲ್ಲಿ ಬೆಂಕಿ: 20ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದಿ ಅಗ್ನಿ ಅವಘಡ ಸಂಭವಿಸಿದೆ. ಗ್ಯಾರೇಜ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ ಐಷಾರಾಮಿ ಕಾರುಗಳು ಸೇರಿ 20ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ಥಣಿಸಂದ್ರದ ಗ್ಯಾರೇಜ್ ನಲ್ಲಿ ಈ ಘಟನೆ ನಡೆದಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಏಕಾಏಕಿ ಗ್ಯಾರೇಜ್ ನಲ್ಲಿ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ. ಗ್ಯಾರೇಜ್ ನಲ್ಲಿ ನಿಲ್ಲಿಸಿದ್ದ ವಾಹನಗಳಿಗೂ ಬೆಂಕಿ ವ್ಯಾಪಿಸಿದ್ದು, ಮುಗಿಲೆತ್ತರದವರೆಗೆ ಬೆಂಕಿಯ ಜ್ವಾಅಲೆ ಆವರಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕಾಗಮಿಸಿದ ಐದು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ಆದರೆ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಸಂಪಿಗೆಹಳ್ಳಿ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular