HomeLatest NewsBREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಬೆಂಕಿ ಅವಘಡ: 11ಕ್ಕೂ ಹೆಚ್ಚು ಮನೆಗಳಿಗೆ ಹಾನಿ; ಬೈಕ್, ಕಾರು,...

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಬೆಂಕಿ ಅವಘಡ: 11ಕ್ಕೂ ಹೆಚ್ಚು ಮನೆಗಳಿಗೆ ಹಾನಿ; ಬೈಕ್, ಕಾರು, ಆಟೋ, ಗೂಡ್ಸ್ ಗಳು ಬೆಂಕಿಗಾಹುತಿ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ನಂದಿನಿ ಲೇಔಟ್ ನ ಕೂಲಿ ಕಾಲೋನಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮನೆಗಳು, ವಾಹನಗಳು ಬೆಂಕಿಗಾಹುತಿಯಾಗಿವೆ.

ತಡರಾತ್ರಿ 2 ಗಂಟೆ ಸುಮಾರಿಗೆ ಕೂಲಿ ಕಾಲೋನಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿ ಉರಿದಿದ್ದು, ಕಿಡಿಗೇಡಿಗಳು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿ ದುಷ್ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿಯ ಕೆನ್ನಾಲಿಗೆಗೆ 11ಕ್ಕೂ ಹೆಚ್ಚು ಮನೆಗಳು ಹಾನಿಯಾಗಿವೆ. ರಸ್ತೆಬದಿ ನಿಲ್ಲಿಸಿದ್ದ ಬೈಕ್, ಕಾರು, ಆಟೋ, ಗೂಡ್ಸ್ ವಾಹನಗಳು ಧಗಧಗನೆ ಹೊತ್ತಿ ಉರಿದು, ಸುಟ್ಟು ಕರಕಲಾಗಿವೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಕಿಡಿಗೇಡಿಗಳ ಕೃತ್ಯವಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular