HomeLatest NewsBIG NEWS: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದ ಶೆಡ್ ಗಳು ಬೆಂಕಿಗಾಹುತಿ

BIG NEWS: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದ ಶೆಡ್ ಗಳು ಬೆಂಕಿಗಾಹುತಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ಬಾಂಗ್ಲಾ ವಲಸಿಗರು ನೆಲೆಸಿರುವ ಶೆಡ್ ಬಳಿ ಬೆಂಕಿ ಅವಘಡ ಸಂಭವಿಸಿದೆ. ಬೆಂಗಳೂರು ಹೊರವಲಯದ ಬೇಗೂರು ಬಳಿ ಈ ಘಟನೆ ನಡೆದಿದೆ.

ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬೇಗೂರು ಬಳಿಯ ಯಲೇನಹಳ್ಳಿ ಬಳಿಯ ಡಂಪಿಂಗ್ ಯಾರ್ಡ್ ಬಳಿ ಈ ಘಟನೆ ನಡೆದಿದೆ. ಇಲ್ಲಿ ೫ ಎಕರೆ ಜಾಗದಲ್ಲಿ ಬಾಂಗ್ಲ ಅವಲಸಿಗರು ಅಕ್ರಮವಾಗಿ ನೆಲೆಸಿದ್ದರು. ಕೆಲ ದಿನಗಳ ಹಿಂದಷ್ಟೇ ಅವರನ್ನು ಖಾಲಿ ಮಾಡಿಸಿ ಶೆಡ್ ಗಳನ್ನು ತೆರವು ಮಾಡಲಾಗಿತ್ತು.

ಆದರೆ ಮತ್ತೆ ಇದೇ ಜಾಗದಲ್ಲಿ ಅಕ್ರಮವಾಗಿ ಶೆಡ್ ಗಳನ್ನು ಹಾಕಿಕೊಂಡು ನೆಲೆಸಿದ್ದಾರೆ. ಬೆಂಕಿ ಅವಘಡದಿಂದಾಗಿ ಬಾಂಗ್ಲಾ ವಲಸಿಗರ ಶೆಡ್ ಗಳು ಬೆಂಕಿಗಾಹುತಿಯಾಗಿವೆ. ಸಿಲಿಂಡರ್ ಸ್ಫೋಟದಿಂದಾಗಿ ಶೆಡ್ ಗಳು ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿವೆ. ಬೆಂಕಿಯ ಜ್ವಾಲ ಮುಗಿಲೆತ್ತರದವರೆಗೂ ವ್ಯಾಪಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸತತ ಎರಡು ಗಂಟೆಗಳ ಕಾಲ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular