HomeLatest NewsBREAKING: ವಿದ್ಯುತ್ ಅವಘಡಕ್ಕೆ ಹೊತ್ತಿಕೊಂಡ ಬೆಂಕಿ: ಮನೆಯಿಂದ ಹೊರಬರಲಾಗದೇ ವೃದ್ಧ ಸಾವು

BREAKING: ವಿದ್ಯುತ್ ಅವಘಡಕ್ಕೆ ಹೊತ್ತಿಕೊಂಡ ಬೆಂಕಿ: ಮನೆಯಿಂದ ಹೊರಬರಲಾಗದೇ ವೃದ್ಧ ಸಾವು

ಬೆಂಗಳೂರು: ವಿದ್ಯುತ್ ಅವಘಡಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ವೃದ್ಧ ಹೊರಬರಲು ಸಾಧ್ಯವಾಗದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ.

ಮೈಲಾರಪ್ಪ (80) ಮೃತ ವ್ಯಕ್ತಿ. ಮೈಲಾರಪ್ಪ ಮೊಮ್ಮಗನ ಜೊತೆ ಕೆಂಗೇರಿ ಬಳಿ ಮನೆಯಲ್ಲಿ ವಾಸವಾಗಿದ್ದರು. ಇಂದು ಬೆಳಿಗ್ಗೆ ಮೊಮ್ಮಗ ಮನೆಯಿಂದ ಹೊರ ಹೋಗಿದ್ದಾಗ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ದುರಂತದಲ್ಲಿ ಮೈಲಾರಪ್ಪ ಮನೆಯೊಳಗೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular