ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಬೆಂಕಿ ಅವಘಡ ಸಂಭವಿಸಿದೆ. ಶುದ್ಧ ತಿಂಡಿ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಬೆಂಗಳೂರಿನ ನೈಸ್ ರಸ್ತೆಯಲ್ಲಿರುವ ಸೋಂಪುರ ಸರ್ಕಲ್ ನಲ್ಲಿರುವ ಪ್ರಸಿದ್ಧ ಶುದ್ಧ ತಿಂಡಿ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಜ್ವಾಲೆ ಇಡೀ ಹೋಟೆಲ್ ಗೆ ಆವರಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಹೋಟೆಲ್ ಧಗ ಧಗನೆ ಹೊತ್ತಿ ಉರಿದಿದೆ.
ಒಂದು ತಿಂಗಳ ಹಿಂದಷ್ಟೇ ಶುದ್ಧ ತಿಂಡೀ ಹೋಟೆಲ್ ಉದ್ಘಾಟನೆಗೊಂಡಿತ್ತು. ಈ ಹೋಟೆಲ್ ನಲ್ಲಿ ರಿಯಾಯಿತಿ ದರದಲ್ಲಿಯೂ ಊಟ-ತಿಂಡಿ ಲಭ್ಯವಾಗುತ್ತಿತ್ತು. ಇದೀಗ ನೂತನವಾಗಿ ಉದ್ಘಾಟನೆಗೊಂಡಿದ್ದ ಹೋಟೆಲ್ ಸಂಪೂರ‍್ನವಾಗಿ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

