HomeKarnatakaಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಬೆಂಗಳೂರಿನಲ್ಲಿ ಹೀಟ್ ಸ್ಟ್ರೋಕ್ ಎಚ್ಚರಿಕೆ

ಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಬೆಂಗಳೂರಿನಲ್ಲಿ ಹೀಟ್ ಸ್ಟ್ರೋಕ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚುತ್ತಿದೆ. ಬಿಸಿಲ ಅಬ್ಬರಕ್ಕೆ ರಾಜ್ಯ ರಾಜಧಾನಿ ಬೆಂಗಳೂರು ಕಾದಕಾವಲಿಯಂತಾಗಿದೆ. ಇಂದು ಬೆಂಗಳುರಿನಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗಲಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಇಂದು ಒಣ ಹವೆಯಿದ್ದು, ಇನ್ನೂ ಕೆಲ ದಿನ ಇದೇ ವಾತಾವರಣ ಮುಂದುವರೆಯಲಿದೆ.

ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆ ಇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಒಣ ಹವೆ ಬಿಸಿಲ ಜಳದ ವಾತಾವಣ ಮುಂದುವರೆಯಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular