ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಕಾಂಪೌಂಡ್ ಕುಸಿದು ದುರಂತ ಸಂಭವಿಸಿದೆ. ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ಆಟೋ ಚಾಲಕರೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಂಜೆ ವೇಳೆ ಸುರಿಧ ಭಾರಿ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ಈ ಅನಾಹುತ ಸಂಭವಿಸಿದೆ. ಬೋರಯ್ಯ ಮೃತ ಆಟೋ ಚಾಲಕ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ಸುರುದ ವರುಣಾರ್ಭಟಕ್ಕೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಬಿದ್ದು, ಬೀದಿಬದಿ ವ್ಯಾಪಾರ ನಡೆಸುತ್ತಿದ್ದ ಏಳು ಜನರು ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಕಾಂಪೌಂಡ್ ಕುಸಿದು ಬಿದ್ದು ಆಟೋ ಚಾಲಕ ಸಾವನ್ನಪ್ಪಿದ್ದಾರೆ.

